230 ಬಸ್ ನಿಲ್ದಾಣಗಳಲ್ಲಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ನೇರ ಪ್ರಸಾರ
ನಾನಾ
230 ಬಸ್ ನಿಲ್ದಾಣಗಳಲ್ಲಿ ಡಿ.ಕೆ. ಶಿವಕುಮಾರ್ ಪ್ರಮಾಣವಚನ ನೇರ ಪ್ರಸಾರ


ಬೆಂಗಳೂರು, 03 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಇಂದು ಸಂಜೆ 4.05ಕ್ಕೆ ಲೋಕ ಭವನದಲ್ಲಿ ನಡೆಯಲಿರುವ ಭವ್ಯ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಐತಿಹಾಸಿಕ ಕ್ಷಣವನ್ನು ರಾಜ್ಯದ ಜನತೆ ನೇರವಾಗಿ ವೀಕ್ಷಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ.

ರಾಜ್ಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ‘ವೃತ್ತಿ ಸೊಲ್ಯೂಷನ್ಸ್’ ಸಹಯೋಗದೊಂದಿಗೆ ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿರುವ ಡಿಜಿಟಲ್ ಪರದೆಗಳಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರಕ್ಕೆ ವ್ಯವಸ್ಥೆ ಕಲ್ಪಿಸಿದೆ.

ಈ ಮೂಲಕ ರಾಜ್ಯದ ನಾನಾ ಭಾಗಗಳಲ್ಲಿ ಸಂಚರಿಸುವ ಪ್ರಯಾಣಿಕರು, ಸಾರ್ವಜನಿಕರು ಹಾಗೂ ರಾಜಕೀಯ ಆಸಕ್ತರು ಬಸ್ ನಿಲ್ದಾಣಗಳಲ್ಲೇ ಉಚಿತವಾಗಿ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶ ಪಡೆಯಲಿದ್ದಾರೆ.

ಸಮಾರಂಭದ ಪ್ರಮುಖ ಕ್ಷಣಗಳು, ಮುಖ್ಯಮಂತ್ರಿ ಹಾಗೂ ಸಚಿವರ ಪ್ರಮಾಣವಚನ ಸೇರಿದಂತೆ ಸಂಪೂರ್ಣ ಕಾರ್ಯಕ್ರಮವನ್ನು ಡಿಜಿಟಲ್ ಪರದೆಗಳ ಮೂಲಕ ಪ್ರಸಾರ ಮಾಡಲಾಗುತ್ತದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande