
ಬೆಂಗಳೂರು, 03 ಜೂನ್ (ಹಿ.ಸ.) :
ಆ್ಯಂಕರ್ : ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಭೇಟಿ ಮಾಡಿ ಆಶಿರ್ವಾದ ಪಡೆದರು.
ಪದ್ಮನಾಭ ನಗರದಲ್ಲಿರುವ ಎಚ್.ಡಿ.ದೇವೇಗೌಡ ಅವರ ನಿವಾಸದಲ್ಲಿ ಭೇಟಿ ಮಾಡಿ ಕಾಲಿಗೆ ನಮಸ್ಕರಿಸಿ ಆಶಿರ್ವಾದ ಪಡೆದರು. ಈ ವೇಳೆ ಶಿವಕುಮಾರ್ ಅವರಿಗೆ ದೇವೇಗೌಡರು ಶಾಲು ಹೊದಿಸಿ ಸನ್ಮಾನಿಸಿ ಅಭಿನಂದಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.