ವಿದೇಶಿ ಸಾಂಸ್ಕೃತಿಕ ಉತ್ಸವ ಕಲಾತಂಡಗಳ ನೋಂದಣಿ
ಅಂತಾರಾಷ್ಟ್ರೀಯ
ವಿದೇಶಿ ಸಾಂಸ್ಕೃತಿಕ ಉತ್ಸವ ಕಲಾತಂಡಗಳ ನೋಂದಣಿ


ಬಳ್ಳಾರಿ, 03 ಜೂನ್ (ಹಿ.ಸ.) :

ಆ್ಯಂಕರ್ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಕಲೆ ಮತ್ತು ಸಂಸ್ಕೃತಿ ಪಸರಿಸಲು ಹಾಗೂ ರಾಜ್ಯದ ಕಲಾವಿದರಿಗೆ ಜಾಗತಿಕ ವೇದಿಕೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಭಾರತೀಯ ಸಾಂಸ್ಕೃತಿಕ ಸಂಬ0ಧಗಳ ಪರಿಷತ್ ಹಾಗೂ ಕರ್ನಾಟಕ ಸರ್ಕಾರದ ನಡುವೆ ನಡೆದಿರುವ ಒಡಂಬಡಿಕೆಯನ್ವಯ, ಹೊರದೇಶಗಳಿಗೆ ಹಾಗೂ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರಗಳಿಗೆ ಕಲಾತಂಡಗಳನ್ನು ಕಳುಹಿಸಿಕೊಡಲು ಅರ್ಹ ತಂಡಗಳಿ0ದ ನೋಂದಣಿ ಆಹ್ವಾನಿಸಲಾಗಿದೆ.

ಸಂಸ್ಕೃತಿ, ಕಲೆ ಹಾಗೂ ಶಿಕ್ಷಣಕ್ಕೆ ಸಂಬ0ಧಿಸಿದ0ತೆ ಉಭಯ ಸರ್ಕಾರಗಳ ನಡುವೆ ಈ ಒಪ್ಪಂದ ಏರ್ಪಟ್ಟಿದ್ದು, ಭಾರತೀಯ ಸಾಂಸ್ಕೃತಿಕ ಸಂಬ0ಧಗಳ ಪರಿಷತ್ ಸಂಸ್ಥೆಯ ವತಿಯಿಂದ ರಾಜ್ಯದ ಸಾಂಸ್ಕೃತಿಕ ಕಲಾತಂಡಗಳನ್ನು ಅಂತರರಾಷ್ಟಿಯ ಮಟ್ಟದಲ್ಲಿ ನಡೆಯುವ ವಿವಿಧ ಸಾಂಸ್ಕೃತಿಕ ಉತ್ಸವ ಹಾಗೂ ಕಾರ್ಯಕ್ರಮಗಳಿಗೆ ಕಳುಹಿಸಿಕೊಡಲಾಗುತ್ತದೆ.

ಈ ಪ್ರಕ್ರಿಯೆಯ ಮೂಲಕ ಅತ್ಯುತ್ತಮ ಕಲಾತಂಡಗಳು ಮತ್ತು ಕಲಾವಿದರನ್ನು ಗುರುತಿಸಿ ಪಟ್ಟಿಗೆ ಸೇರಿಸಿಕೊಳ್ಳಲಾಗುವುದು, ಇದರಿಂದ ಕಲಾವಿದರ ಪ್ರತಿಭೆಗೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಪ್ರಚಾರ ಸಿಗಲಿದೆ.

ಆಸಕ್ತ ಕಲಾವಿದರು ಮತ್ತು ಕಲಾತಂಡಗಳು ನಿಗದಿತ ನಮೂನೆಯ ಅರ್ಜಿಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಜೂ.12 ರ ಒಳಗಾಗಿ ಸಲ್ಲಿಸಬೇಕು. ಭರ್ತಿ ಮಾಡಿದ ಅರ್ಜಿಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ತಲುಪಿಸಬೇಕು.

ನಿಗದಿತ ಅರ್ಜಿ ನಮೂನೆಯನ್ನು ಇಲಾಖೆಯ ಅಧಿಕೃತ ವೆಬ್ಸೈಟ್ ಆದ www.kannadasiri.karnataka.gov.in ನಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande