
ವಿಜಯಪುರ, 03 ಜೂನ್ (ಹಿ.ಸ.) :
ಆಂಕರ್ : ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಕ್ಷೇತ್ರದ ಕಡಕೋಳ ಗ್ರಾಮದಲ್ಲಿ ಸನ್ 2024-25ನೇ ಸಾಲಿನ ಲೆಕ್ಕ ಶೀರ್ಷಿಕೆ 5054ನೇ ಯೋಜನೆಯಡಿ ಮಂಜೂರಾದ ಸಿ.ಸಿ ರಸ್ತೆ ನಿರ್ಮಾಣ ಕಾಮಗಾರಿಗೆ ಇಂದು ಭೂಮಿ ಪೂಜೆಯನ್ನುನ ಶಾಸಕ ರಾಜುಗೌಡ ನೆರವರಿಸಿದರು.
ಈ ಕಾಮಗಾರಿಯು ಗ್ರಾಮದ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಸಹಕಾರಿಯಾಗಲಿದ್ದು, ಸಾರ್ವಜನಿಕರ ಬಹುಕಾಲದ ಬೇಡಿಕೆಗೆ ಸ್ಪಂದಿಸಿದಂತಾಗಿದೆ.
ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ರಸ್ತೆ ನಿರ್ಮಾಣ ಅತ್ಯಂತ ಅಗತ್ಯವಾಗಿದ್ದು, ಉತ್ತಮ ರಸ್ತೆ ಸಂಪರ್ಕದಿಂದ ಗ್ರಾಮಸ್ಥರ ಸಂಚಾರ ಸುಗಮವಾಗುವುದರ ಜೊತೆಗೆ ಕೃಷಿ ಚಟುವಟಿಕೆಗಳು ಹಾಗೂ ವ್ಯಾಪಾರ ವಹಿವಾಟುಗಳಿಗೂ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಕಡಕೋಳ ಗ್ರಾಮದಲ್ಲಿ ಕೈಗೆತ್ತಿಕೊಳ್ಳಲಾಗುತ್ತಿರುವ ಈ ಸಿ.ಸಿ ರಸ್ತೆ ಕಾಮಗಾರಿಯಿಂದ ಮಳೆಗಾಲದಲ್ಲಿ ಎದುರಾಗುವ ರಸ್ತೆ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದ್ದು, ಗ್ರಾಮಸ್ಥರಿಗೆ ಉತ್ತಮ ಗುಣಮಟ್ಟದ ರಸ್ತೆ ಸೌಲಭ್ಯ ಲಭ್ಯವಾಗಲಿದೆ. ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಮೂಲಕ ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಯುವಕ ಮಿತ್ರರು, ವಿವಿಧ ಸಂಘಟನೆಗಳ ಮುಖಂಡರು, ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಮಗಾರಿಯ ಯಶಸ್ವಿ ಅನುಷ್ಠಾನಕ್ಕೆ ಶುಭ ಹಾರೈಸಿದರು. ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳು ನಿರಂತರವಾಗಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಮೂಲಸೌಕರ್ಯ ಯೋಜನೆಗಳನ್ನು ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಯಿತು.
ಭೂಮಿ ಪೂಜೆ ಕಾರ್ಯಕ್ರಮವು ಗ್ರಾಮಸ್ಥರ ಸಂಭ್ರಮ ಹಾಗೂ ಉತ್ಸಾಹದ ನಡುವೆ ಯಶಸ್ವಿಯಾಗಿ ನೆರವೇರಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande