
ಬೆಂಗಳೂರು, 03 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯ ರಾಜಕಾರಣದ ಬಹು ನಿರೀಕ್ಷಿತ ಬೆಳವಣಿಗೆಗೆ ಇಂದು ಸಾಕ್ಷಿಯಾಗಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಂಜೆ 4.05ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಜಧಾನಿ ಬೆಂಗಳೂರಿನ ಲೋಕ ಭವನದಲ್ಲಿ ನಡೆಯಲಿರುವ ಪ್ರಮಾಣವಚನ ಸಮಾರಂಭಕ್ಕೆ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು, ನಾನಾ ರಾಜ್ಯಗಳ ಮುಖ್ಯಮಂತ್ರಿಗಳು, ಸಚಿವರು, ಶಾಸಕರು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ. ರಾಜ್ಯಪಾಲರು ನೂತನ ಮುಖ್ಯಮಂತ್ರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.
ಪ್ರಮಾಣವಚನ ಸಮಾರಂಭದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪ್ರಮುಖ ರಸ್ತೆಗಳಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಸಮಾರಂಭದಲ್ಲಿ ಕೆಲ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಸಂಭ್ರಮ ಮನೆ ಮಾಡಿದ್ದು, ರಾಜ್ಯದ ಜನತೆ ಹೊಸ ಸರ್ಕಾರದ ಆಡಳಿತದತ್ತ ಚಿತ್ತ ನೆಟ್ಟಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.