ಹೊಸ ಬಂಡಿಹರ್ಲಾಪುರ ಗ್ರಾಮದಲ್ಲಿ ಋತುಚಕ್ರ ನೈರ್ಮಲ್ಯ ದಿನಾಚರಣೆ
ಕೊಪ್ಪಳ, 03 ಜೂನ್ (ಹಿ.ಸ.) : ಆ್ಯಂಕರ್ : ಪ್ರತಿಯೊಬ್ಬ ಮಹಿಳೆ ಮಾಸಿಕ ಋತುಚಕ್ರ ಸಂದರ್ಭದಲ್ಲಿ ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಿ ಸ್ಯಾನಿಟೆರಿ ಪ್ಯಾಡ್ ಬಳಕೆಗೆ ಒತ್ತು ನೀಡಬೇಕೆಂದು ಜಿಲ್ಲಾ ಪಂಚಾಯತಿಯ ಸ್ವಚ್ಛ ಭಾರತ ಮಿಷನ್ ಯೋಜನೆಯ ಸ್ಯಾನಿಟೇಷನ್ & ಹೈಜಿನ್ ಸಮಾಲೋಚಕಿ ಬಸಮ್ಮ ಹುಡೇದ ಕರೆ
ಕೊಪ್ಪಳ


ಕೊಪ್ಪಳ, 03 ಜೂನ್ (ಹಿ.ಸ.) :

ಆ್ಯಂಕರ್ : ಪ್ರತಿಯೊಬ್ಬ ಮಹಿಳೆ ಮಾಸಿಕ ಋತುಚಕ್ರ ಸಂದರ್ಭದಲ್ಲಿ ವೈಯಕ್ತಿಕ ಶುಚಿತ್ವಕ್ಕೆ ಆದ್ಯತೆ ನೀಡಿ ಸ್ಯಾನಿಟೆರಿ ಪ್ಯಾಡ್ ಬಳಕೆಗೆ ಒತ್ತು ನೀಡಬೇಕೆಂದು ಜಿಲ್ಲಾ ಪಂಚಾಯತಿಯ ಸ್ವಚ್ಛ ಭಾರತ ಮಿಷನ್ ಯೋಜನೆಯ ಸ್ಯಾನಿಟೇಷನ್ & ಹೈಜಿನ್ ಸಮಾಲೋಚಕಿ ಬಸಮ್ಮ ಹುಡೇದ ಕರೆ ನೀಡಿದರು.

ಬಂಡಿಹರ್ಲಾಪುರ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮ ಪಂಚಾಯತಿಯ ಆವರಣದಲ್ಲಿ ಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ “ಮೇ-28ರ ಋತುಚಕ್ರ ನೈರ್ಮಲ್ಯ ದಿನಾಚರಣೆ'' ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಟ್ಟಿನ ಸಮಯದಲ್ಲಿ ಮಾಸಿಕ ಋತುಚಕ್ರ ನಿರ್ವಹಣೆ, ಶುಚಿಯಾದ ಬಟ್ಟೆ ಬಳಕೆ ಹಾಗು ಸ್ಯಾನಿಟೆರಿ ಪ್ಯಾಡ್ ಬಳಕೆಯಿಂದ ಆಗುವ ಅನುಕೂಲಗಳು, ವೈಯಕ್ತಿಕ ಶುಚಿತ್ವ ಕುರಿತು ಮಹತ್ವದ ಮಾಹಿತಿ ನೀಡಿದರು. ಮಹಿಳೆಯರ ವೈಯಕ್ತಿಕ ಶುಚಿತ್ವ ಹಾಗೂ ಸ್ಯಾನಿಟರಿ ಪ್ಯಾಡ್ಗಳ ಬಳಕೆ ಹಾಗೂ ಬಳಸಿದ ಪ್ಯಾಡ್ ಗಳನ್ನು ಇನ್ಸಿನರೇಟರ್ ಮೂಲಕ ವೈಜ್ಞಾನಿಕ ನಿರ್ವಹಣೆ ಕುರಿತು ಮಾಹಿತಿ ನೀಡಲಾಯಿತು. ಇತ್ತೀಚಿನ ದಿನಗಳಲ್ಲಿ ನಾವು ಆರೋಗ್ಯದ ಬಗ್ಗೆ ನಾವು ಕಾಳಜಿವಹಿಸದೇ ಇರುವದರಿಂದ ಅನಾರೋಗ್ಯಕ್ಕೆ ಒಳಗಾಗುತ್ತಿದ್ದೆವೆ. ಮುಟ್ಟನ್ನು ಗುಟ್ಟನ್ನಾಗಿಸದೇ ಮುಟ್ಟನ್ನು ಒಗ್ಗೂಡಿಕೊಂಡು ಆರೋಗ್ಯದ ಬದಲಾವಣೆಗೆ ಮುನ್ನುಡಿ ಬರೆಯೋಣ ಎಂದು ಕರೆ ನೀಡಿದರು.

ಮಹಿಳೆಯರು ಋತುಚಕ್ರ ಸಂದರ್ಭದಲ್ಲಿ ವೈಯಕ್ತಿಕ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಲು ಪ್ರತಿ ಗ್ರಾಮ ಪಂಚಾಯತಿಯಲ್ಲಿ ಬಳಕೆಯಾದ ಪ್ಯಾಡ್ಗಳನ್ನು ಸಂಗ್ರಹಿಸಿ ವೈಜ್ಞಾನಿಕ ನಿರ್ವಹಣೆ ಮಾಡಲು ಇನ್ಸಿನರೆಟರ್ ಅಳವಡಿಸಲಾಗುತ್ತಿದ್ದು ಎಲ್ಲಾ ಮಹಿಳೆಯರು ಅವುಗಳಿಗೆ ನೀಡಬೇಕು. ಎಲ್ಲಿ ಬೇಕಾದಲ್ಲಿ ಬಿಸಾಡದೇ ಗ್ರಾಮ ಪಂಚಾಯತಿ ವಾಹನಕ್ಕೆ ನೀಡಬೇಕು ಅಥವಾ ನಿಗದಿಪಡಿಸಿದ ಸ್ಥಳದಲ್ಲಿ ಅವುಗಳನ್ನು ವಿಲೆವಾರಿ ಮಾಡಬೇಕು. ಬಯಲು ಶೌಚಕ್ಕೆ ಹೋಗುವದರಿಂದ ಅನೇಕ ರೋಗಗಳು ಹರಡುವ ಸಾಧ್ಯತೆ ಶೇ.80 ರಷ್ಟು ಇರುತ್ತದೆ. ಹಸಿ ಕಸ ಮತ್ತು ಒಣ ಕಸ ಪ್ರತ್ಯೇಕಿಸಿ ವಾಹನಕ್ಕೆ ನೀಡಬೇಕೆಂದು ಕರೆ ನೀಡಿದರು.

ಪಂಚಾಯತ ಅಭಿವೃದ್ಧಿ ಅಧಿಕಾರಿ ಅಶೋಕ ರಾಂಪುರ ಅವರು ಮಾತನಾಡಿ, ಮಹಿಳೆಯರಿಗೆ ವೈಯಕ್ತಿಕ ಶುಚಿತ್ವ ಎನ್ನುವದು ಆರೋಗ್ಯದ ಮೂಲಕ ಬುನಾದಿ. ಹಾಗಾಗಿ ಮಹಿಳೆಯರು ಸ್ವಚ್ಛತೆಗೆ ಹಾಗು ಶುಚಿತ್ವಕ್ಕೆ ಆದ್ಯತೆ ನೀಡಬೇಕೆಂದು ಕರೆ ನೀಡಿದರು. ಇಂದಿನ ಒತ್ತಡದ ಜೀವನದಲ್ಲಿ ನಾವುಗಳು ಬದುಕುತ್ತಿದ್ದು, ಆರೋಗ್ಯದ ಸಲಹೆಗಳನ್ನು ನಾವುಗಳು ಅಳವಡಿಸಿಕೊಂಡಲ್ಲಿ ಸುಂದರ ಬದುಕನ್ನು ಸಾಗಿಸಲು ಅನುಕೂಲವಾಗುತ್ತದೆ ಎಂದರು.

ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ತಮ್ಮಣ್ಣ, ಕಲ್ಪನಾ, ಕೆಎಚ್ಪಿಟಿ ಸಂಯೋಜಕಿ ಪುಷ್ಪ ಗ್ರಾಮ ಪಂಚಾಯತಿ ಕಾರ್ಯದರ್ಶಿ ನಾಗಪ್ಪ ಕುರುಬಡಗಿ, ಶಾಲಾ ಮಕ್ಕಳು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande