ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಧಾನಿ ಮೋದಿ ಅಭಿನಂದನೆ
ನವದೆಹಲಿ, 03 ಜೂನ್ (ಹಿ.ಸ.) : ಆ್ಯಂಕರ್ : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಪ್ರಧಾನಿ ಮೋದಿ, “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ
Pm post


ನವದೆಹಲಿ, 03 ಜೂನ್ (ಹಿ.ಸ.) :

ಆ್ಯಂಕರ್ : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಪ್ರಧಾನಿ ಮೋದಿ, “ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಅವರ ಅಧಿಕಾರಾವಧಿಗೆ ಶುಭಾಶಯಗಳು. ರಾಜ್ಯದ ಜನರ ಕಲ್ಯಾಣ, ಅಭಿವೃದ್ಧಿ ಮತ್ತು ಪ್ರಗತಿಗಾಗಿ ಕೇಂದ್ರ ಸರ್ಕಾರವು ಕರ್ನಾಟಕ ಸರ್ಕಾರದೊಂದಿಗೆ ನಿಕಟವಾಗಿ ಕಾರ್ಯನಿರ್ವಹಿಸಲಿದೆ” ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande