ಕೋಲಾರ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಯಾಗಿ ಕೆ.ಲೀಲಾ ಅಧಿಕಾರ ಸ್ವೀಕಾರ
ಕೋಲಾರ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಯಾಗಿ ಕೆ.ಲೀಲಾ ಅಧಿಕಾರ ಸ್ವೀಕಾರ
ಕೋಲಾರ ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳಾಗಿ ಬಡ್ತಿ ಹೊಂದಿರುವ ಕೆ.ಲೀಲಾ ಅವರು ಇಂದು ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಅಧಿಕೃತವಾಗಿ ಪ್ರಭಾರ ದೈಜಹಿಕ ಶಿಕ್ಷಣ ಪರಿವೀಕ್ಷಕ ಎಸ್.ಚೌಡಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು.


ಕೋಲಾರ, ೦೩ ಜೂನ್ (ಹಿ.ಸ) :

ಆ್ಯಂಕರ್ : ತಾಲ್ಲೂಕು ದೈಹಿಕ ಶಿಕ್ಷಣಾಧಿಕಾರಿಗಳಾಗಿ ಬಡ್ತಿ ಹೊಂದಿರುವ ಕೆ.ಲೀಲಾ ಬುಧವಾರ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯಲ್ಲಿ ಅಧಿಕೃತವಾಗಿ ಪ್ರಭಾರ ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಚೌಡಪ್ಪ ಅವರಿಂದ ಅಧಿಕಾರ ಸ್ವೀಕರಿಸಿದರು.

ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಅಧ್ಯಕ್ಷರೂ ಆಗಿರುವ ಚೌಡಪ್ಪ ಮಾತನಾಡಿ, ಇದೇ ತಾಲ್ಲೂಕಿನಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿಯಾಗಿ ಉತ್ತಮ ಸೇವೆ ಮಾಡಿ ಹೆಸರುಗಳಿಸಿರುವ ಕೆ.ಲೀಲಾ ಅವರು ಇದೀಗ ಮುಂಬಡ್ತಿ ಹೊಂದಿ ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾಗಿ ನೇಮಕಗೊಂಡಿರುವುದು ಸಂತಸದ ವಿಷಯವಾಗಿದೆ ಎಂದು ತಿಳಿಸಿ, ತಾಲ್ಲೂಕಿನ ಕ್ರೀಡಾ ಚಟುವಟಿಕೆಗಳಿಗೆ ಪೂರ್ಣ ಸಹಕಾರದ ಭರವಸೆ ನೀಡಿದರು.

ಕಳೆದ ೮ ವರ್ಷಗಳಿಮದ ನಾನು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾಗಿ ಪ್ರಭಾರ ವಹಿಸಿಕೊಂಡು ಕೆಲಸ ನಿರ್ವಹಿಸಿದ್ದು, ಈ ಸಂದರ್ಭದಲ್ಲಿ ತಾಲ್ಲೂಕಿನ ಎಲ್ಲಾ ದೈಹಿಕ ಶಿಕ್ಷಕರು ನೀಡಿರುವ ಸಹಕಾರ ಮರೆಯಲಾಗದು. ಶಾಲಾ ಶಿಕ್ಷಣ ಇಲಾಖೆಯ ಕ್ರೀಡಾಕೂಟಗಳು ಮತ್ತು ರಾಷ್ಟಿçÃಯ ಮತ್ತು ನಾಡ ಹಬ್ಬಗಳನ್ನು ಯಶಸ್ವಿಯಾಗಿ ನಡೆಸಲು ನೀಡಿರುವ ಸಹಕಾರವನ್ನು ಲೀಲಾ ಅವರಿಗೂ ನೀಡಲು ಕೋರಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಕೆ.ಲೀಲಾ, ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡುವ ಮೂಲಕ ತಾಲ್ಲೂಕನ್ನು ಮಾದರಿಯಾಗಿಸುವ ತಮ್ಮ ಆಶಯಕ್ಕೆ ಸಹಕಾರ ಕೋರಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ಅಧೀಕ್ಷಕ ಪ್ರಕಾಶ್, ಎಸ್.ಜಯಶಂಕರ್ ಪ್ರಸಾದ್, ವಿನಯ್,ಸುದರ್ಶನ್, ಸುರೇಶ್, ಯಲ್ಲಮ್ಮ ಸೇರಿದಂತೆ ದೈಹಿಕ ಶಿಕ್ಷಕರು ಹಾಜರಿದ್ದು ಶುಭ ಕೋರಿದರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande