
ಕೊಪ್ಪಳ, 03 ಜೂನ್ (ಹಿ.ಸ.) :
ಆ್ಯಂಕರ್ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದಿಂದ ಮೇ 29 ರಿಂದ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ವಿತರಣಾ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಅರ್ಹ ವಿದ್ಯಾರ್ಥಿಗಳು ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿದ್ದಾರೆ.
ಕೊಪ್ಪಳ ವಿಭಾಗದಲ್ಲಿ ಬಹಳ ಹಿಂದಿನಿಂದಲೂ ವಿದ್ಯಾರ್ಥಿ ವರ್ಗದ ಅನುಕೂಲಕ್ಕಾಗಿ ವಿದ್ಯಾರ್ಥಿಗಳ ವಾಸಸ್ಥಳ ಹಾಗೂ ವಿದ್ಯಾ ಸಂಸ್ಥೆಯ ನಡುವೆ ನಿಗಮದ ಬಸ್ಗಳಲ್ಲಿ ಪ್ರಯಾಣಿಸಲು ಅನುಕೂಲವಾಗುವಂತೆ ಹೆಚ್ಚಿನ ರಿಯಾಯಿತಿ ದರದಲ್ಲಿ ಬಸ್ ಪಾಸ್ಗಳನ್ನು ವಿತರಣೆ ಮಾಡಲಾಗುತ್ತಿದೆ. ಅದರಂತೆ ಸರ್ಕಾರದ ನಿರ್ದೇಶನದಂತೆ 2023-24ನೇ ಸಾಲಿನಿಂದ ಕೊಪ್ಪಳ ವಿಭಾಗದಲ್ಲಿ ಬಸ್ ಪಾಸ್ಗಳನ್ನು ಸಂಪೂರ್ಣವಾಗಿ ಗಣಕೀಕೃತಗೊಳಿಸಿ ಸೇವಾ ಸಿಂಧು ಪೆÇೀರ್ಟಲ್ ಮೂಲಕ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಕರ್ನಾಟಕ-1, ಗ್ರಾಮ -1 ಕೇಂದ್ರಗಳ ಮುಖಾಂತರ ಪಾಸುಗಳನ್ನು ವಿತರಿಸುವ ವ್ಯವಸ್ಥೆಯನ್ನು ಪ್ರಸ್ತುತ 2026-27ನೇ ಸಾಲಿನಲ್ಲಿಯೂ ಮುಂದುವರಿಸಿ Sevಚಿsiಟಿಜhu.ಞಚಿಡಿಟಿಚಿಣಚಿಞಚಿ.gov.iಟಿ ಮೇ 29 ರಿಂದ ಪಾಸ್ ವಿತರಣಾ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ. ಅಗತ್ಯ ದಾಖಲಾತಿಗಳಾದ ಸೇವಾ ಸಿಂಧುವಿನಲ್ಲಿ ಅರ್ಜಿ, ವಿದ್ಯಾ ಸಂಸ್ಥೆಗೆ ಶುಲ್ಕ ಪಾವತಿಸಿರುವ ರಸೀದಿ, ಆಧಾರ ಕಾರ್ಡ್, ಪರಿಶಿಷ್ಟ ಜಾತಿ ಹಾಗೂ ಪಂಗಡದ ವಿದ್ಯಾಥಿಗಳು ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರದ ಪ್ರತಿ ಲಗತ್ತಿಸಬೇಕು.
ರಾಜ್ಯ ಸರ್ಕಾರದ ನೂತನ ಯೋಜನೆಯಾದ “ಶಕ್ತಿ ಯೋಜನೆ” ಯಡಿಯಲ್ಲಿ ರಾಜ್ಯದ ಎಲ್ಲಾ ಮಹಿಳೆಯರು (ವಿದ್ಯಾರ್ಥಿನಿಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ) ರಾಜ್ಯದೊಳಗೆ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿರುತ್ತದೆ. ಈ ಯೋಜನೆಯಡಿ ರಾಜ್ಯದೊಳಗೆ ಪ್ರಯಾಣಿಸಿದ ವಿದ್ಯಾರ್ಥಿನಿಯರು ಬಸ್ ಪಾಸ್ ಪಡೆಯುವ ಅಗತ್ಯವಿರುವುದಿಲ್ಲ. ಆದರೆ ವಿದ್ಯಾರ್ಥಿನಿಯರು ಬಸ್ ಪಾಸ್ ಪಡೆಯಲು ಇಚ್ಛಿಸದಲ್ಲಿ ಪಾಸನ್ನು ಪಡೆದುಕೊಳ್ಳಬಹುದಾಗಿರುತ್ತದೆ.
ವಿದ್ಯಾರ್ಥಿ ಬಸ್ ಪಾಸ್ ಪಿವಿಸಿ ಕಾರ್ಡ್ ಆಗಿದ್ದು, ಕಾರ್ಡಿನ ಮೇಲೆ ವಿದ್ಯಾರ್ಥಿ ವಿವರಗಳು ಮುದ್ರಿತವಾಗುತ್ತವೆ. ಅಲ್ಲದೆ ಕ್ಯೂಆರ್ ಕೋಡ್ ಅನ್ನು ಇ.ಟಿ.ಎಂ., ಸ್ಮಾರ್ಟ್ ಮೊಬೈಲ್ನಲ್ಲಿ ಸ್ಕ್ಯಾನ್ ಮಾಡಿದಾಗ ವಿದ್ಯಾರ್ಥಿ ಹೆಸರು, ಭಾವಚಿತ್ರ, ಪ್ರಯಾಣದ ಮಾರ್ಗ, ಕಾಲೇಜಿನ ಹೆಸರು, ಬಸ್ ಪಾಸ್ ಮಾನ್ಯತೆ ಅವಧಿ ಮತ್ತು ತರಗತಿ ವಿವರಗಳು ಪ್ರದರ್ಶನವಾಗಲಿವೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್