ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ
ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ
ಉಚಿತ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ


ಕೋಲಾರ, ಜೂನ್ ೩ (ಹಿ.ಸ) :

ಆ್ಯಂಕರ್ : ನಗರ ಹೊರವಲಯದ ಹೊನ್ನೇನಹಳ್ಳಿಯ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಜೂ.೦೮, ಸೋಮವಾರದಿಂದ ಉಚಿತ ಹೈನುಗಾರಿಕೆ ಮತ್ತು ಎರೆಹುಳುಗೊಬ್ಬರ ತಯಾರಿಕಾ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ೧೮ ರಿಂದ ೫೦ ವರ್ಷ ವಯೋಮಿತಿಯುಳ್ಳವರು ತಮ್ಮ ರೇಷನ್ ಕಾರ್ಡ್, ಆಧಾರ್ ಕಾರ್ಡ್, ೩ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್ ಪ್ರತಿಯೊಂದಿಗೆ ನೇರವಾಗಿ ತರಬೇತಿಯಲ್ಲಿ ಭಾಗವಹಿಸಬಹುದು.

ತರಬೇತಿಯು ೧೨ ದಿನಗಳ ಕಾಲಾವಧಿಯದಾಗಿದ್ದು, ತರಬೇತಿ ಅವಧಿಯಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ಕೊಡಿಸಲಾಗುತ್ತದೆ. ಅಭ್ಯರ್ಥಿಗಳಿಗೆ ತರಬೇತಿ ವೇಳೆ ಉಚಿತವಾಗಿ ಊಟ ಹಾಗೂ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ. ತರಬೇತಿ ನಂತರ ಕೇಂದ್ರ ಸರ್ಕಾರದ ಪ್ರಮಾಣ ಪತ್ರ ವಿತರಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ತರಬೇತುದಾರರ ಮೊ.೮೯೭೧೩೦೮೭೭೬, ೭೭೬೦೩೧೩೮೩೩ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande