
ಬೆಂಗಳೂರು, 03 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯದ ನೂತನ ಸಚಿವ ಸಂಪುಟದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರಿಗೆ ಮತ್ತೊಮ್ಮೆ ಸಚಿವರಾಗುವ ಅವಕಾಶ ದೊರೆತಿದ್ದು, ಅವರ ಸೇರ್ಪಡೆ ಬಹುತೇಕ ಖಚಿತವಾಗಿದೆ.
ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಮಲಿಂಗಾರೆಡ್ಡಿ ಅವರಿಗೆ ಖುದ್ದಾಗಿ ದೂರವಾಣಿ ಕರೆ ಮಾಡಿ, ಇಂದು ನಡೆಯಲಿರುವ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ. ಈ ಮೂಲಕ ಅವರು ನೂತನ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯುವುದು ಖಚಿತಗೊಂಡಂತಾಗಿದೆ.
ಸಚಿವ ಸಂಪುಟ ರಚನೆ ಕುರಿತಾಗಿ ಡಾ. ಜಿ. ಪರಮೇಶ್ವರ್ ಅವರೊಂದಿಗೆ ಚರ್ಚೆ ನಡೆಸುತ್ತಿರುವ ಡಿ.ಕೆ. ಶಿವಕುಮಾರ್, ಸಂಪುಟಕ್ಕೆ ಸೇರ್ಪಡೆಯಾಗಲಿರುವ ನಾಯಕರಿಗೆ ವೈಯಕ್ತಿಕವಾಗಿ ಕರೆ ಮಾಡಿ ಮಾಹಿತಿ ನೀಡುತ್ತಿದ್ದಾರೆ.
ಈ ನಡುವೆ ಹಿರಿಯ ನಾಯಕರಾದ ಶರಣಪ್ರಕಾಶ್ ಪಾಟೀಲ್ ಹಾಗೂ ಈಶ್ವರ್ ಖಂಡ್ರೆ ಅವರಿಗೂ ದೂರವಾಣಿ ಕರೆ ಮಾಡಿರುವ ಡಿಕೆಶಿ, ಇಂದು ಸಂಜೆ ನಡೆಯಲಿರುವ ಪ್ರಮಾಣವಚನ ಸಮಾರಂಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವಂತೆ ಆಹ್ವಾನ ನೀಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.