ಜಿಎಸ್ಟಿ ಮೇಲ್ಮನವಿ ಸಲ್ಲಿಕೆಗೆ ಅಂತಿಮ ದಿನಾಂಕ ಜುಲೈ 31ರವರೆಗೆ ವಿಸ್ತರಣೆ
ನವದೆಹಲಿ, 30 ಜೂನ್ (ಹಿ.ಸ.) : ಆ್ಯಂಕರ್ : ಸರಕು ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಜಿಎಸ್ಟಿಎಟಿ) ಮುಂದೆ ಮೇಲ್ಮನವಿ ಸಲ್ಲಿಸಲು ಕೇಂದ್ರ ಸರ್ಕಾರ ಅಂತಿಮ ದಿನಾಂಕವನ್ನು 2026ರ ಜುಲೈ 31ರವರೆಗೆ ವಿಸ್ತರಿಸಿದೆ. ಈ ಮೊದಲು 2025ರ ಸೆಪ್ಟೆಂಬರ್ 17ರಂದು ಹೊರಡಿಸಿದ್ದ ಅಧಿಸೂಚನೆಯ ಪ್ರಕಾರ, ಜಿಎ
ಹಣಕಾಸು ಸಚಿವಾಲಯ


ನವದೆಹಲಿ, 30 ಜೂನ್ (ಹಿ.ಸ.) :

ಆ್ಯಂಕರ್ : ಸರಕು ಮತ್ತು ಸೇವಾ ತೆರಿಗೆ ಮೇಲ್ಮನವಿ ನ್ಯಾಯಮಂಡಳಿ (ಜಿಎಸ್ಟಿಎಟಿ) ಮುಂದೆ ಮೇಲ್ಮನವಿ ಸಲ್ಲಿಸಲು ಕೇಂದ್ರ ಸರ್ಕಾರ ಅಂತಿಮ ದಿನಾಂಕವನ್ನು 2026ರ ಜುಲೈ 31ರವರೆಗೆ ವಿಸ್ತರಿಸಿದೆ.

ಈ ಮೊದಲು 2025ರ ಸೆಪ್ಟೆಂಬರ್ 17ರಂದು ಹೊರಡಿಸಿದ್ದ ಅಧಿಸೂಚನೆಯ ಪ್ರಕಾರ, ಜಿಎಸ್ಟಿ ಕಾಯ್ದೆಯ ಕಲಂ 112(1) ಹಾಗೂ 112(3)ರ ಅನ್ವಯ ಮೇಲ್ಮನವಿ ಸಲ್ಲಿಸಲು 2026ರ ಜೂನ್ 30 ಕೊನೆಯ ದಿನಾಂಕವಾಗಿತ್ತು. ಇದೀಗ ತೆರಿಗೆದಾರರು ಮತ್ತು ವಿವಿಧ ವಲಯಗಳ ಪ್ರತಿನಿಧಿಗಳ ಮನವಿಯನ್ನು ಪರಿಗಣಿಸಿ, ಅವಧಿಯನ್ನು ಒಂದು ತಿಂಗಳು ವಿಸ್ತರಿಸಲಾಗಿದೆ.

ಕೇಂದ್ರ ಹಣಕಾಸು ಸಚಿವಾಲಯದ ಪ್ರಕಾರ, ಅಂತಿಮ ದಿನಾಂಕ ಸಮೀಪಿಸುತ್ತಿದ್ದಂತೆ ಜಿಎಸ್ಟಿಎಟಿ ಪೋರ್ಟಲ್ನಲ್ಲಿ ಏಕಕಾಲದಲ್ಲಿ ಹೆಚ್ಚಿನ ಸಂಖ್ಯೆಯ ಮೇಲ್ಮನವಿಗಳು ಸಲ್ಲಿಕೆಯಾಗಿದ್ದರಿಂದ ತಾಂತ್ರಿಕ ತೊಂದರೆಗಳು ಎದುರಾಗಿದ್ದವು. ಕಳೆದ 15 ದಿನಗಳಲ್ಲೇ ಸುಮಾರು 30 ಸಾವಿರ ಮೇಲ್ಮನವಿಗಳು ದಾಖಲಾಗಿದ್ದು, ಕೆಲವು ದಿನಗಳಲ್ಲಿ ದಿನಕ್ಕೆ 5,500ಕ್ಕೂ ಹೆಚ್ಚು ಮೇಲ್ಮನವಿಗಳು ಸಲ್ಲಿಕೆಯಾಗಿದ್ದವು.

ಈ ಹಿನ್ನೆಲೆಯಲ್ಲಿ ತಾಂತ್ರಿಕ ಒತ್ತಡವನ್ನು ಕಡಿಮೆ ಮಾಡಲು ಮತ್ತು ತೆರಿಗೆದಾರರಿಗೆ ಅನುಕೂಲವಾಗುವಂತೆ ಮೇಲ್ಮನವಿ ಸಲ್ಲಿಕೆಯ ಅಂತಿಮ ದಿನಾಂಕವನ್ನು 2026ರ ಜುಲೈ 31ರವರೆಗೆ ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ತೆರಿಗೆದಾರರು ಕೊನೆಯ ಕ್ಷಣದವರೆಗೆ ಕಾಯದೆ, ಸಾಧ್ಯವಾದಷ್ಟು ಮುಂಚಿತವಾಗಿಯೇ ತಮ್ಮ ಮೇಲ್ಮನವಿಗಳನ್ನು ಸಲ್ಲಿಸುವಂತೆ ಕೇಂದ್ರ ಸರ್ಕಾರ ಸಲಹೆ ನೀಡಿದೆ. ಇದರಿಂದ ಪೋರ್ಟಲ್ ಮೇಲಿನ ಒತ್ತಡ ಕಡಿಮೆಯಾಗುವುದರ ಜೊತೆಗೆ ತಾಂತ್ರಿಕ ಅಡಚಣೆಗಳನ್ನೂ ತಪ್ಪಿಸಬಹುದು ಎಂದು ಸಚಿವಾಲಯ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande