ಎಸ್ಐಆರ್ ಪ್ರಕ್ರಿಯಲ್ಲಿ ಎಲ್ಲರೂ ಮಾಹಿತಿ ನೀಡಿ : ಜಿಲ್ಲಾಧಿಕಾ
ಕೊಪ್ಪಳ, 30 ಜೂನ್ (ಹಿ.ಸ.) : ಆ್ಯಂಕರ್ : ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಆರಂಭವಾಗಿದ್ದು, ಬಿಎಲ್ಓಗಳು ಎಸ್.ಐ.ಆರ್ ಅರ್ಜಿಯನ್ನು ನೀಡಲಿದ್ದು ಎಲ್ಲ ಮತದಾರರು ಗಣತಿ ನಮೂನೆಯನ್ನು ಭರ್ತಿ ಮಾಡಿ ಸಹಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ
Everyone should provide information in the SIR process: District Magistrate Send feedback


Everyone should provide information in the SIR process: District Magistrate Send feedback


ಕೊಪ್ಪಳ, 30 ಜೂನ್ (ಹಿ.ಸ.) :

ಆ್ಯಂಕರ್ : ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್.ಐ.ಆರ್) ಪ್ರಕ್ರಿಯೆ ಆರಂಭವಾಗಿದ್ದು, ಬಿಎಲ್ಓಗಳು ಎಸ್.ಐ.ಆರ್ ಅರ್ಜಿಯನ್ನು ನೀಡಲಿದ್ದು ಎಲ್ಲ ಮತದಾರರು ಗಣತಿ ನಮೂನೆಯನ್ನು ಭರ್ತಿ ಮಾಡಿ ಸಹಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಸುರೇಶ್ ಬಿ. ಇಟ್ನಾಳ ಅವರು ಹೇಳಿದ್ದಾರೆ.

ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್.ಐ.ಆರ್)-2026 ಕುರಿತು ಜಾಗೃತಿಗಾಗಿ ಕೊಪ್ಪಳ ನಗರದ ಪ್ರವಾಸಿ ಮಂದಿರ ಬಳಿ ಮಂಗಳವಾರ (ಜೂ. 30ರಂದು) ಹಮ್ಮಿಕೊಂಡಿದ್ದ ವಾಕಥಾನ್ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 30ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಓ) ಮನೆ ಮನೆಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಪರಿಶೀಲಿಸಲಿದ್ದಾರೆ. ಮತದಾರರು ಎಸ್ಐಆರ್ ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಬೇಕು. ಮತದಾರರ ಪಟ್ಟಿಯಲ್ಲಿರುವ ಹೆಸರುಗಳ ಪರಿಶೀಲನೆ, ತಿದ್ದುಪಡಿ, ಹೊಸ ಮತದಾರರ ಹೆಸರು ಸೇರ್ಪಡೆ, ಮೃತಪಟ್ಟವರು ಹಾಗೂ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಪ್ರಕ್ರಿಯೆಯೂ ನಡೆಯಲಿದೆ. ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಗಣತಿ ನೋಂದಣಿ ಅರ್ಜಿಗೆ ಮತದಾರ ಕುಟುಂಬದವರು ಯಾರಾದರೂ ಸಹಿ ಮಾಡಬಹುದು. ಈಗಾಗಲೇ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸಲು ಬಿಎಲ್ಓಗಳು ಹಾಗೂ ಬಿಎಲ್ಎಗಳ ಸಭೆ, ತರಬೇತಿ ನಡೆಸಿ ಎಲ್ಲ ಮಾಹಿತಿ ನೀಡಲಾಗಿದೆ. ಬಿಎಲ್ಓಗಳು ಹಾಗೂ ಬಿಎಲ್ಎಗಳು ಸಮನ್ವಯದಿಂದ ಕೆಲಸ ಮಾಡಿದರೇ ಅರ್ಹ ಮತದಾರರು ಮತದಾರ ಪಟ್ಟಿಯಿಂದ ಹೊರಗುಳಿಯುವುದನ್ನು ತಪ್ಪಿಸಬಹುದು ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ ಅವರು ಮಾತನಾಡಿ, ಚುನಾವಣಾ ಆಯೋಗದ ಸೂಚನೆಯಂತೆ ಎಸ್ಐಆರ್-2026ರ ಪ್ರಕ್ರಿಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಅಗತ್ಯ ಮಾಹಿತಿ ಒದಗಿಸಬೇಕು. ಒಬ್ಬ ಮತದಾರ ಎರಡು ಕಡೆ ಮತದಾರ ಪಟ್ಟಿಯಲ್ಲಿ ಹೆಸರು ಹೊಂದುವುದು ಶಿಕ್ಷಾರ್ಹ ಅಪರಾಧವಾಗಿದೆ. ಪಟ್ಟಿಯಲ್ಲಿ ನೈಜ ಮತದಾರರ ಹೆಸರು ಕೈ ತಪ್ಪಿಹೋಗದಂತೆ ನೋಡಿಕೊಳ್ಳಬೇಕು. ಅರ್ಹ ಮತದಾರರು ಬಿಟ್ಟುಹೋಗದಂತೆ ಅನರ್ಹ ಮತದಾರರು ಸೇರ್ಪಡೆ ಆಗದಂತೆ ಎಲ್ಲರೂ ಕಾರ್ಯನಿರ್ವಹಿಸಬೇಕು ಎಂದರು.

ಜೂನ್ 30 ರಿಂದ ಜುಲೈ 29ರವರೆಗೆ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ನೀಡಲಿದ್ದು, ಎಲ್ಲ ಮತದಾರರು, ಸಾರ್ವಜನಿಕರು ಸಹಕಾರ ನೀಡಿ ಅಗತ್ಯ ಮಾಹಿತಿ ಒದಗಿಸಬೇಕು. ನಗರ ಪ್ರದೇಶದಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮತದಾರರಿಗೆ ಹೆಚ್ಚಿನ ಮಾಹಿತಿ ನೀಡಲು ಈಗಾಗಲೇ ಮತದಾರರ ನೆರವು ಕೇಂದ್ರಗಳನ್ನು ತೆರೆಯಲಾಗಿದ್ದು, ಜನರು ಇದರ ಉಪಯೋಗ ಪಡೆದುಕೊಳ್ಳಗಬೇಕು ಎಂದರು.

ವಾಕ್ ಥಾನ್: ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)-2026 ಜಾಗೃತಿಗಾಗಿ ನಗರದ ಪ್ರವಾಸಿ ಮಂದಿರದಿಂದ ಅಶೋಕ ವೃತ್ತ, ಬಸವೇಶ್ವರ ವೃತ್ತ ಮಾರ್ಗವಾಗಿ ಅಧಿಕಾರಿಗಳು, ಕಾಲೇಜು ವಿದ್ಯಾರ್ಥಿಗಳೊಂದಿಗೆ ವಾಕಥಾನ್ ಜಾಥಾ ನಡೆಯಿತು. ವಿದ್ಯಾರ್ಥಿಗಳು ಮತದಾನ ಹಾಗೂ ಎಸ್ಐಆರ್ ಕುರಿತು ಘೋಷಣೆಗಳನ್ನು ಕೂಗಿ ಜಾಗೃತಿ ಮೂಡಿಸಿದರು.

ಈ ಸಂದರ್ಭದಲ್ಲಿ ಕೊಪ್ಪಳ ಸಹಾಯಕ ಆಯುಕ್ತರಾದ ಮಹೆಬೂಬ್ ಜೀಲಾನ್, ಜಿ.ಪಂ ಉಪ ಕಾರ್ಯದರ್ಶಿಗಳಾದ ಟಿ.ಕೃಷ್ಣ ಮೂರ್ತಿ, ಯೋಜನ ನಿರ್ದೇಶಕರಾದ ಎಸ್.ಎಂ. ಕಾಂಬಳೆ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ಮಂಜುನಾಥ ಗುಂಡೂರು ಸೇರಿದಂತೆ ಜಿಲ್ಲಾ ಮತ್ತು ತಾಲೂಕ ಮಟ್ಟದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವಾಕ್ ಥಾನದಲ್ಲಿ ಭಾಗವಹಿಸಿದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande