
ನವದೆಹಲಿ, 30 ಜೂನ್ (ಹಿ.ಸ.) :
ಆ್ಯಂಕರ್ : ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರ ನಿವಾಸದಲ್ಲಿ ಇಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಸೌಹಾರ್ದಯುತವಾಗಿ ಭೇಟಿ ಮಾಡಿ, ತಮ್ಮ ಲೋಕ ಸಭಾ ಕ್ಷೇತ್ರವಾದ ಚಿತ್ರದುರ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಸಿಎಸ್ಆರ್ ನಿಧಿಯನ್ನು ಗರಿಷ್ಠ ಪ್ರಮಾಣದಲ್ಲಿ ಮಂಜೂರು ಮಾಡುವಂತೆ ಮನವಿ ಮಾಡಿದರು.
ಚಿತ್ರದುರ್ಗ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರು, ಆರೋಗ್ಯ, ಶಿಕ್ಷಣ, ಡಿಜಿಟಲ್ ಸ್ಮಾರ್ಟ್ ತರಗತಿಗಳು, ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯಕೀಯ ಉಪಕರಣಗಳು, ಕೌಶಲ್ಯಾಭಿವೃದ್ಧಿ, ಮೂಲಸೌಕರ್ಯ ಸೇರಿದಂತೆ ವಿವಿಧ ಜನೋಪಯೋಗಿ ಯೋಜನೆಗಳ ಅನುಷ್ಠಾನಕ್ಕೆ ಸಿಎಸ್ಆರ್ ನೆರವು ಒದಗಿಸುವಂತೆ ವಿನಂತಿಸಿದರು.
ಈ ಸಂದರ್ಭದಲ್ಲಿ ಸಚಿವರು ನನ್ನ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಿ, ಅಗತ್ಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಚಿತ್ರದುರ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ನಾನಾ ಇಲಾಖೆಗಳು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳ ಸಹಕಾರವನ್ನು ಪಡೆದು ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಸಂಕಲ್ಪವನ್ನು ವ್ಯಕ್ತಪಡಿಸಿರುವುದಾಗಿ ಕಾರಜೋಳ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.