ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಸಂಪೂರ್ಣ ವಿಫಲ : ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು, 30 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಅನಗತ್ಯ ವಿಷಯಗಳ ಬಗ್ಗೆ ಚರ್ಚೆಯಲ್ಲಿ ತೊಡಗಿದೆ ಎಂದು ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸ
ಅಶೋಕ


ಬೆಂಗಳೂರು, 30 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರ ಅಭಿವೃದ್ಧಿ ಕಾರ್ಯಗಳನ್ನು ಸಂಪೂರ್ಣವಾಗಿ ಕಡೆಗಣಿಸಿದ್ದು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು ಅನಗತ್ಯ ವಿಷಯಗಳ ಬಗ್ಗೆ ಚರ್ಚೆಯಲ್ಲಿ ತೊಡಗಿದೆ ಎಂದು ವಿಧಾನಸಭೆಯ ಪ್ರತಿ ಪಕ್ಷದ ನಾಯಕ ಆರ್. ಅಶೋಕ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ಗೆ ಬರ ಬಂದಂತಾಗಿದೆ. ಯಾರಿಗೂ ಅಭಿವೃದ್ಧಿ ಅನುದಾನ ನೀಡುತ್ತಿಲ್ಲ. ಕೆಲವು ಭಾಗಗಳಲ್ಲಿ ಪ್ರವಾಹ ಉಂಟಾಗಿದ್ದರೂ ಪರಿಹಾರ ಕಾರ್ಯಗಳಿಗೆ ಹಣವಿಲ್ಲ. ಮಳೆ ಕೊರತೆಯಿಂದ ಸಂಕಷ್ಟ ಎದುರಿಸುತ್ತಿರುವ ಪ್ರದೇಶಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಸಹ ಹಣವಿಲ್ಲ. ಅಭಿವೃದ್ಧಿ ಯೋಜನೆಗಳ ಪರಿಶೀಲನೆಗಾಗಿ ಅಧಿಕಾರಿಗಳ ಸಭೆಯನ್ನೂ ನಡೆಸಿಲ್ಲ. ಆದರೆ ಆರ್ಎಸ್ಎಸ್ ಮತ್ತು ಬಿಡದಿಯಲ್ಲಿ ಯಾರ ಆಸ್ತಿ ಎಷ್ಟಿದೆ ಎಂಬಂತಹ ವಿಚಾರಗಳನ್ನೇ ಸರ್ಕಾರ ಚರ್ಚಿಸುತ್ತಿದೆ ಎಂದು ಟೀಕಿಸಿದರು.

ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಉಲ್ಲೇಖಿಸಿದ ಅಶೋಕ್, ತಮ್ಮ ಇಲಾಖೆಯ ಸಾಧನೆ ಅಥವಾ ಕಲಬುರಗಿ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಒಂದೇ ಬಾರಿ ಮಾತನಾಡಿಲ್ಲ. ವಿಧಾನ ಸಭೆಯಲ್ಲಿ ನಾನು ಕೇಳಿದ ಹಲವು ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡಲಿಲ್ಲ. ಚಿತ್ತಾಪುರ ಕ್ಷೇತ್ರದಲ್ಲೇ ಅಭಿವೃದ್ಧಿ ಮಾಡಲಾಗದವರು, 150 ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಆರ್ಎಸ್ಎಸ್ ಬಗ್ಗೆ ಮಾತನಾಡುತ್ತಿದ್ದಾರೆ. ತಾಕತ್ತಿದ್ದರೆ ಕಳೆದ ಮೂರು ವರ್ಷಗಳಲ್ಲಿ ಸರ್ಕಾರ ಮಾಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಮಾಡಲಿ ಎಂದು ಸವಾಲು ಹಾಕಿದರು.

ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮೆಟ್ರೊ ಯೋಜನೆಗಳ ಅಭಿವೃದ್ಧಿಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ದಿವಂಗತ ನಾಯಕ ಅನಂತಕುಮಾರ್ ಅವರ ಕೊಡುಗೆ ಮಹತ್ವದ್ದಾಗಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ನಿಜವಾಗಿಯೂ ಅಭಿವೃದ್ಧಿ ಮಾಡಿದ್ದರೆ ಕಳೆದ ಮೂರು ಲೋಕಸಭೆ ಚುನಾವಣೆಗಳಲ್ಲಿ ಸೋಲು ಕಾಣುತ್ತಿರಲಿಲ್ಲ. ದೇಶದ ಅನೇಕ ರಾಜ್ಯಗಳಲ್ಲಿ ಕಾಂಗ್ರೆಸ್ ಹಿನ್ನಡೆ ಅನುಭವಿಸಿರುವುದೇ ಅದರ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಅಶೋಕ್ ಆರೋಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande