ಜುಲೈ 2 ರಂದು ಫ. ಗು.ಹಳಕಟ್ಟಿಯವರ ಜನ್ಮದಿನ
ಕೊಪ್ಪಳ, 30 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಜುಲೈ 2 ರಂದು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳದ ಅಶೋಕ ಸರ್ಕಲ್ ಹ
ಜುಲೈ 2 ರಂದು ಫ. ಗು.ಹಳಕಟ್ಟಿಯವರ ಜನ್ಮದಿನ


ಕೊಪ್ಪಳ, 30 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆಯನ್ನು ಜುಲೈ 2 ರಂದು ಗುರುವಾರ ಬೆಳಿಗ್ಗೆ 10.30 ಗಂಟೆಗೆ ಕೊಪ್ಪಳದ ಅಶೋಕ ಸರ್ಕಲ್ ಹತ್ತಿರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಅವರು ತಿಳಿಸಿದ್ದಾರೆ.

ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಸಮಾರಂಭದ ಉದ್ಘಾಟನೆ ನೆರವೇರಿಸುವರು ಹಾಗೂ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಘನ ಉಪಸ್ಥಿತಿ ವಹಿಸುವರು.

ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ, ಕನಕಗಿರಿ ಶಾಸಕರಾದ ತಂಗಡಗಿ ಶಿವರಾಜ ಸಂಗಪ್ಪ, ಗಂಗಾವತಿ ಶಾಸಕರಾದ ಜಿ.ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ. ನಮೋಶಿ, ಡಾ. ಚಂದ್ರಶೇಖರ ಬಿ. ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಬಿಸಾಬ ದೋಟಿಹಾಳ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರಸನ್ನ ವಿ. ಗಡಾದ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಪಾಲ್ಗೊಳ್ಳುವರು. ವಿಶೇಷ ಆಹ್ವಾನಿತರಾಗಿ ವಸತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನರಾಜ್ ಅವರು ಆಗಮಿಸುವರು.

ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಶರಣಬಸಪ್ಪ ಬಿಳಿಎಲಿ ಅವರು ಕಾರ್ಯಕ್ರಮದ ಬಗ್ಗೆ ವಿಶೇಷ ಉಪನ್ಯಾಸ ನೀಡುವರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ವರ್ಣಿತ್ ನೇಗಿ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿಗಳಾದ ಡಾ.ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಉಪಸ್ಥಿತರಿರುವರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande