ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಭೇಟಿ
ದಾವಣಗೆರೆ, 30 ಜೂನ್ (ಹಿ.ಸ.) : ಆ್ಯಂಕರ್ : ದಾವಣಗೆರೆ ನಗರದ ಚಿಗಟೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಈ ವೇಳೆ ಆಸ್ಪತ್ರೆಯ ಅಧಿಕಾರಿಗಳು ಹಾಗೂ ವೈದ್ಯರಿಂದ
Visit


ದಾವಣಗೆರೆ, 30 ಜೂನ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ನಗರದ ಚಿಗಟೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.

ಈ ವೇಳೆ ಆಸ್ಪತ್ರೆಯ ಅಧಿಕಾರಿಗಳು ಹಾಗೂ ವೈದ್ಯರಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಸಂಸದೆ, ಅಗ್ನಿ ಅವಘಡದಿಂದ ಉಂಟಾದ ಪರಿಸ್ಥಿತಿ ಮತ್ತು ಕೈಗೊಂಡಿರುವ ಸುರಕ್ಷತಾ ಕ್ರಮಗಳ ಕುರಿತು ಸಮಗ್ರ ಪರಿಶೀಲನೆ ನಡೆಸಿದರು.

ಅಗ್ನಿಶಾಮಕ ದಳದ ಸಿಬ್ಬಂದಿ ಸಮಯೋಚಿತವಾಗಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಶೀಘ್ರ ನಿಯಂತ್ರಣಕ್ಕೆ ತಂದಿರುವುದನ್ನು ಅವರು ಶ್ಲಾಘಿಸಿದರು. ಸಿಬ್ಬಂದಿಯ ಕ್ಷಿಪ್ರ ಕಾರ್ಯಾಚರಣೆಯಿಂದ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿರುವುದಾಗಿ ಅವರು ಅಭಿಪ್ರಾಯಪಟ್ಟರು.

ಘಟನೆಯಿಂದ ತಾತ್ಕಾಲಿಕವಾಗಿ ವ್ಯತ್ಯಯಗೊಂಡಿರುವ ವೈದ್ಯಕೀಯ ಸೇವೆಗಳನ್ನು ಆದಷ್ಟು ಬೇಗ ಪುನರಾರಂಭಿಸಬೇಕು. ಚಿಕಿತ್ಸೆಗಾಗಿ ಬರುವ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಿ ಅಗತ್ಯ ಕ್ರಮಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಂಸದೆ ಸೂಚನೆ ನೀಡಿದರು.

ಆಸ್ಪತ್ರೆಯಲ್ಲಿನ ಸುರಕ್ಷತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಿ, ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande