ಕೇಂದ್ರ ಸಚಿವ ವಿ. ಸೋಮಣ್ಣ ಭೇಟಿ ಮಾಡಿದ ಈಶ್ವರ ಖಂಡ್ರೆ
ನವದೆಹಲಿ, 30 ಜೂನ್ (ಹಿ.ಸ.) : ಆ್ಯಂಕರ್ : ದೆಹಲಿ ಪ್ರವಾಸದಲ್ಲಿರುವ ಸಚಿವ ಈಶ್ವರ ಖಂಡ್ರೆ ಅವರು ಮಂಗಳವಾರ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಅವರ ಕಚೇರಿಯಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ಭೇಟಿಯ ವೇಳೆ ಕರ್ನಾಟಕದಲ್ಲಿ ರೈಲ್ವೆ ಮೂಲಸೌಕರ್ಯ
Somanna meets Eshwar Khandre


ನವದೆಹಲಿ, 30 ಜೂನ್ (ಹಿ.ಸ.) :

ಆ್ಯಂಕರ್ : ದೆಹಲಿ ಪ್ರವಾಸದಲ್ಲಿರುವ ಸಚಿವ ಈಶ್ವರ ಖಂಡ್ರೆ ಅವರು ಮಂಗಳವಾರ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಅವರ ಕಚೇರಿಯಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು.

ಭೇಟಿಯ ವೇಳೆ ಕರ್ನಾಟಕದಲ್ಲಿ ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಗೆ ವೇಗ ನೀಡುವುದು, ಹೊಸ ರೈಲು ಸೇವೆಗಳನ್ನು ಆರಂಭಿಸುವುದು ಹಾಗೂ ಈಗಿರುವ ಸೇವೆಗಳನ್ನು ವಿಸ್ತರಿಸುವ ಕುರಿತು ಸಮಗ್ರವಾಗಿ ಚರ್ಚಿಸಲಾಯಿತು. ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದ ರೈಲ್ವೆ ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಅಗತ್ಯವನ್ನು ಸಚಿವರು ಪ್ರಸ್ತಾಪಿಸಿದರು.

ಇದರ ಜೊತೆಗೆ, ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ವಿವಿಧ ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನ, ಅಗತ್ಯ ನೆರವು ಹಾಗೂ ಸಮನ್ವಯದ ಕುರಿತು ಸಹ ಚರ್ಚೆ ನಡೆಸಲಾಯಿತು ಎಂದು ಖಂಡ್ರೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande