ಅಧ್ಯಾಪಕರ ನೇಮಕಾತಿಗೆ ಅರ್ಜಿ ಆಹ್ವಾನ
ಅಧ್ಯಾಪಕರ ನೇಮಕಾತಿಗೆ ಅರ್ಜಿ ಆಹ್ವಾನ
ಅಧ್ಯಾಪಕರ ನೇಮಕಾತಿಗೆ ಅರ್ಜಿ ಆಹ್ವಾನ


ಕೋಲಾರ, ಜೂನ್ ೦೪ (ಹಿ.ಸ)

ಆಂಕರ್ : ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಎಂ.ಬಿ.ಎ (ಮಾಸ್ಟರ್ಆಫ್ ಬಿಸಿನೆಸ್ ಅಡ್ಮಿನಿಸ್ಟೆಷನ್) ಹಾಗೂ ಎಂ.ಸಿ.ಎ (ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಶನ್ಸ್) ಸ್ನಾತಕೋತ್ತರ ವಿಭಾಗಗಳಲ್ಲಿ ೨೦೨೬-೨೭ನೇ ಶೈಕ್ಷಣಿಕ ಸಾಲಿಗೆ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ಅಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಂ.ಬಿ.ಎ ವಿಭಾಗದಲ್ಲಿ ತಾತ್ಕಾಲಿಕ ಗುತ್ತಿಗೆ ಆಧಾರದ ಸಹ ಪ್ರಾಧ್ಯಾಪಕರ ಹುದ್ದೆ-೦೧ ಮತ್ತು ತಾತ್ಕಾಲಿಕ ಗುತ್ತಿಗೆ ಆಧಾರದ ಸಹಾಯಕ ಪ್ರಾಧ್ಯಾಪಕರ ಹುದ್ದೆ-೦೩ ಹಾಗೂ ಎಂ.ಸಿ.ಎ ವಿಭಾಗದಲ್ಲಿ ತಾತ್ಕಾಲಿಕ ಗುತ್ತಿಗೆ ಆಧಾರದ ಸಹ ಪ್ರಾಧ್ಯಾಪಕರ ಹುದ್ದೆ-೦೧ ಮತ್ತು ತಾತ್ಕಾಲಿಕ ಗುತ್ತಿಗೆ ಆಧಾರದ ಸಹಾಯಕ ಪ್ರಾಧ್ಯಾಪಕರ ಹುದ್ದೆ-೦೩ ಲಭ್ಯವಿದ್ದು, ಸಂಬ0ಧಿತ ವಿಷಯದಲ್ಲಿ ಕನಿಷ್ಠ ೬೦% ಅಂಕಗಳೊ0ದಿಗೆ ಸ್ನಾತಕೋತ್ತರ ಪದವಿ ಪಡೆದಿರಬೇಕು. ಯುಜಿಸಿ ನಿಯಮಾನುಸಾರ ನೆಟ್, ಸ್ಲೆಟ್, ಪಿ.ಎಚ್.ಡಿ ಅರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಅದ್ಯತೆ ನೀಡಲಾಗುವುದು ಹಾಗೂ ಯಾವುದಾರರೂ ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಬೋಧಕರಾಗಿ ಕನಿಷ್ಠ ೦೮ವರ್ಷಗಳ ಅನುಭವವನ್ನು ಹೊಂದಿರತಕ್ಕದ್ದು.

ಅರ್ಹ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ವೆಬ್ಸೈಟ್ bnu.karnataka.gov.in ನಿಂದ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಯೊಂದಿಗೆ ಜೂನ್ ೧೧ ರಂದು ಸಂಜೆ ೫.೩೦ ಗಂಟೆಯೊಳಗೆ ಅಗತ್ಯ ದಾಖಲೆಗಳ ಸ್ವಯಂ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಆಡಳಿತ ಕಛೇರಿಗೆ ಸಲ್ಲಿಸಬಹುದೆಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande