
ಬಳ್ಳಾರಿ, 04 ಜೂನ್ (ಹಿ.ಸ.) :
ಆ್ಯಂಕರ್ : ನಗರದ ವಾರ್ಡ್ ನಂ.29 ಕುರುಬರ ಓಣಿಥಿ ಮಲ್ಲೇಶ್ವರ ಗುಡಿ ಹತ್ತಿರದ ಕೆ.ಸಿ.ಪವನ್(25) ಏ.23 ರಂದು ಕಾಣೆಯಾಗಿರುವ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅವರು ತಿಳಿಸಿದ್ದಾರೆ.
ಚಹರೆ ಗುರುತು : ಅಂದಾಜು 5.7 ಅಡಿ ಎತ್ತರ, ದುಂಡು ಮುಖ, ಸಾಧಾರಣ ಎಣ್ಣೆಗೆಂಪು ಮೈಬಣ್ಣ, ತೆಳುವಾದ ಮೈಕಟ್ಟು, ದುಂಡು ಮುಖ, ಹಾಗೂ ಕುರುಚಲು ಗಡ್ಡ ಮತ್ತು ಮೀಸೆ ಬಿಟ್ಟಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ನೀಲಿ ಡಿಸೈನ್ ನ ತುಂಬು ತೋಳಿನ ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ.
ಯುವಕನ ಬಗ್ಗೆ ಸುಳಿವು ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731,244145 ಅಥವಾ ಪಿಎಸ್ಐ ಮೊ.94808203085, ಪಿಐ ಮೊ.9480803047 ಬಳ್ಳಾರಿ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್