ಕಾನೂನು ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚನೆ
ಬೆಂಗಳೂರು, 04 ಜೂನ್ (ಹಿ.ಸ.) : ಆ್ಯಂಕರ್ : ಯಾವುದೇ ಒತ್ತಡಕ್ಕೆ ಮಣಿಯದೇ ಕಾನೂನು ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸುವಂತರ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ. ವಿಧಾನ ಸೌಧದಲ್ಲಿ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತ
Cm dks


ಬೆಂಗಳೂರು, 04 ಜೂನ್ (ಹಿ.ಸ.) :

ಆ್ಯಂಕರ್ : ಯಾವುದೇ ಒತ್ತಡಕ್ಕೆ ಮಣಿಯದೇ ಕಾನೂನು ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸುವಂತರ ಅಧಿಕಾರಿಗಳಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ.

ವಿಧಾನ ಸೌಧದಲ್ಲಿ ಸರ್ಕಾರದ ಎಲ್ಲಾ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸಭೆ ನಡೆಸಿ ನಂತರ ಮಾಧ್ಯಮಗಳಿಗೆ ಮಾತನಾಡಿದ ಅವರು, ರಾಜ್ಯದ ಅಧಿಕಾರಿಗಳನ್ನು ಕರೆಸಿ ಹೊಸ ಸರ್ಕಾರ ಯಾವ ದಿಕ್ಕಿನಲ್ಲಿ ಆಲೋಚನೆ ಮಾಡುತ್ತಿದೆ ಎಂದು ಸಂದೇಶ ನೀಡಿದ್ದೇವೆ. ಮೊದಲ ದಿನ ನಾವು ಅವರಿಂದ ಏನು ನಿರೀಕ್ಷೆ ಮಾಡಿದ್ದೇವೆ, ನಮ್ಮಿಂದ ಅವರ ನಿರೀಕ್ಷೆಗಳೇನು ಎಂದು ಚರ್ಚೆ ಮಾಡಲಾಗಿದೆ.

ನಮ್ಮ ಸರ್ಕಾರ ಜಾತಿ, ಧರ್ಮ, ಪ್ರಭಾವಕ್ಕೆ ಮಣಿಯುವುದಿಲ್ಲ. ಯಾವ ಅಧಿಕಾರಿಗಳು ಇದಕ್ಕೆ ಮಣಿಯಬಾರದು. ಪಾರದರ್ಶಕ, ಮುಕ್ತ ಹಾಗೂ ಭ್ರಷ್ಟಾಚಾರ ರಹಿತ ಆಡಳಿತ ನೀಡಬೇಕು. ಇದಕ್ಕೆ ನಿಮ್ಮ ಸಹಕಾರ ಬೇಕು ಎಂದು ಕೇಳಿದ್ದೇವೆ. ಪಾರದರ್ಶಕತೆ ಗಮನದಲ್ಲಿಟ್ಟುಕೊಂಡು ಕೆಲಸ ಮಾಡಿ. ಜನರ ಭಾವನಗೆ ತಕ್ಕಂತೆ, ಜನರ ಸಮಸ್ಯೆ ಬಗೆಹರಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಕಾನೂನು ಹೊರತಾಗಿ ಬೇರೆ ಯಾವ ಒತ್ತಡಕ್ಕೂ ಮಣಿಯಬಾರದು. ಮಂತ್ರಿಗಳು, ಶಾಸಕರು, ನನ್ನ ಕಚೇರಿಯವರ ಮಾತು ಕೇಳದೇ, ಕಾನೂನು ವ್ಯಾಪ್ತಿಯಲ್ಲಿ ಸಕಾರಾತ್ಮಕ ಮನೋಭಾವದಲ್ಲಿ ಕೆಲಸ ಮಾಡಿ. ಸಮಸ್ಯೆಗಳಿಗೆ ವ್ಯವಸ್ಥೆ ಚೌಕಟ್ಟಿನಲ್ಲೇ ಪರಿಹಾರ ಹುಡುಕಿ ಎಂದು ಸೂಚಿಸಿದ್ದೇನೆ.

ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಕಡ್ಡಾಯವಾಗಿ ಆಯಾ ಜಿಲ್ಲೆಗಳಲ್ಲಿರುವ ತಾಲ್ಲೂಕುಗಳಿಗೂ ಹೋಗಿ ಪರಿಶೀಲನೆ ಮಾಡಬೇಕು.

15 ದಿನಗಳಲ್ಲಿ ಎಲ್ಲಾ ಇಲಾಖೆಗಳಲ್ಲಿನ ಕಾರ್ಯಯೋಜನೆ ಸಿದ್ಧಪಡಿಸಬೇಕು ಎಂದು ಸೂಚಿಸಿದ್ದೇನೆ. ಎಲ್ಲರೂ ಹೊಣೆಗಾರಿಕೆಯಾಗಿರಬೇಕು.

ದೇಶದಲ್ಲಿ ವಿದ್ಯಾವಂತರು, ಬುದ್ಧಿವಂತರು ಇಲ್ಲದಿದ್ದರೂ ಪ್ರಜ್ಞಾವಂತರು ಇರಬೇಕು. ನಮ್ಮಲ್ಲಿ ಸಾಮಾನ್ಯ ಪ್ರಜ್ಞೆ ಇರಬೇಕು. ಎಲ್ಲಾ ಸಮಸ್ಯೆಗಳಿಗೆ ಒಂದು ಪರಿಹಾರ ಇರುತ್ತದೆ, ಸಕಾರಾತ್ಮಕ ಮನೋಭಾವ ಇರಬೇಕು” ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande