ನ್ಯಾನೋ ಯೂರಿಯಾ ಬಳಕೆಗೆ ಜಿಲ್ಲಾಧಿಕಾರಿ ಕರೆ
ಗದಗ, 04 ಜೂನ್ (ಹಿ.ಸ.) : ಆ್ಯಂಕರ್ : ಗದಗ ಜಿಲ್ಲೆಯ ರೈತರು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದರ ಜೊತೆಗೆ ಮಣ್ಣಿನ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ರಸಗೊಬ್ಬರಗಳನ್ನು ವೈಜ್ಞಾನಿಕ ರೀತಿಯಲ್ಲಿ ಹಾಗೂ ಶಿಫಾರಸು ಮಾಡಿದ ಪ್ರಮಾಣದಲ್ಲಿ ಬಳಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಪ್ರಸ್ತುತ ಜಿಲ
ಫೋಟೋ


ಗದಗ, 04 ಜೂನ್ (ಹಿ.ಸ.) :

ಆ್ಯಂಕರ್ : ಗದಗ ಜಿಲ್ಲೆಯ ರೈತರು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದರ ಜೊತೆಗೆ ಮಣ್ಣಿನ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ರಸಗೊಬ್ಬರಗಳನ್ನು ವೈಜ್ಞಾನಿಕ ರೀತಿಯಲ್ಲಿ ಹಾಗೂ ಶಿಫಾರಸು ಮಾಡಿದ ಪ್ರಮಾಣದಲ್ಲಿ ಬಳಸುವಂತೆ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ ಯೂರಿಯಾ ಬಳಕೆ ಶಿಫಾರಸು ಪ್ರಮಾಣಕ್ಕಿಂತ ಹೆಚ್ಚಾಗುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದ ಮಣ್ಣಿನ ಫಲವತ್ತತೆ ಕುಸಿತ, ಪೋಷಕಾಂಶಗಳ ಅಸಮತೋಲನ. ಉತ್ಪಾದನಾ ವೆಚ್ಚದಲ್ಲಿ ಹೆಚ್ಚಳ ಹಾಗೂ ಪರಿಸರ ಮಾಲಿನ್ಯದಂತಹ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ರೈತರು ಮಣ್ಣಿನ ಪರೀಕ್ಷೆ ಆಧಾರಿತ ಪೋಷಕಾಂಶ ನಿರ್ವಹಣೆಯನ್ನು ಅನುಸರಿಸಬೇಕು.

ಮಣ್ಣಿನ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಗೋಮಯ ಗೊಬ್ಬರ, ಕಾಂಪೋಸ್ಟ್, ವರ್ಮಿ ಕಾಂಪೋಸ್ಟ್. ಹಸಿರು ಗೊಬ್ಬರ, ಜೈವಿಕ ಗೊಬ್ಬರ ಹಾಗೂ ಬೆಳೆ ಅವಶೇಷಗಳಿಂದ ತಯಾರಿಸಲಾದ ಸಾವಯವ ಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು. ಸಾವಯವ ಗೊಬ್ಬರಗಳ ಬಳಕೆಯಿಂದ ಮಣ್ಣಿನ ಸಾವಯವ ಇಂಗಾಲದ ಪ್ರಮಾಣ ಹೆಚ್ಚಾಗಿ ಮಣ್ಣಿನ ರಚನೆ. ನೀರು ಹಿಡಿದಿಡುವ ಸಾಮರ್ಥ್ಯ ಹಾಗೂ ಸೂಕ್ಷ÷್ಮಜೀವಿಗಳ ಚಟುವಟಿಕೆ ಉತ್ತಮಗೊಳ್ಳುತ್ತದೆ. ರೈತರು ಸರಿಯಾದ ಗೊಬ್ಬರ, ಸರಿಯಾದ ಪ್ರಮಾಣ, ಸರಿಯಾದ ಸಮಯ ಹಾಗೂ ಸರಿಯಾದ ವಿಧಾನ ಎಂಬ ತತ್ವದ ಅನುಸರಣೆಯಿಂದ ಗೊಬ್ಬರಗಳ ಬಳಕೆ ದಕ್ಷತೆ ಹೆಚ್ಚುವುದರ ಜೊತೆಗೆ ಉತ್ಪಾದನಾ ವೆಚ್ಚ ಕಡಿಮೆಯಾಗುತ್ತದೆ.

ಜಿಲ್ಲೆಯಲ್ಲಿ ನ್ಯಾನೋ ಯೂರಿಯಾ ಬಳಕೆಯನ್ನು ಉತ್ತೇಜಿಸಲಾಗುತ್ತಿದೆ. ನ್ಯಾನೋ ಯೂರಿಯಾ ಬಳಕೆಯಿಂದ ಸಸ್ಯಗಳಿಗೆ ಸಾರಜನಕ ಪೋಷಕಾಂಶ ಪರಿಣಾಮಕಾರಿಯಾಗಿ ದೊರೆಯುತ್ತದೆ. ರಾಸಾಯನಿಕ ಯೂರಿಯಾ ಮೇಲಿನ ಅವಲಂಬನೆ ಕಡಿಮೆಯಾಗುವುದರ ಜೊತೆಗೆ ಗೊಬ್ಬರ ಬಳಕೆಯ ದಕ್ಷತೆ ಹೆಚ್ಚುತ್ತದೆ. ಕೃಷಿ ಇಲಾಖೆಯ ಶಿಫಾರಸಿನಂತೆ ನ್ಯಾನೋ ಯೂರಿಯಾವನ್ನು ಬಳಸುವಂತೆ ರೈತರಿಗೆ ಸಲಹೆ ನೀಡಲಾಗಿದೆ.

ಬೆಳೆವಾರು ಶಿಫಾರಸು ಮಾಡಿದ ಪ್ರಮಾಣದಲ್ಲಿ ಮಾತ್ರ ಗೊಬ್ಬರ ಬಳಸಬೇಕು. ರಸಗೊಬ್ಬರಗಳ ಜೊತೆಗೆ ಸಾವಯವ ಗೊಬ್ಬರ ಮತ್ತು ಜೈವಿಕ ಗೊಬ್ಬರಗಳ ಸಮಗ್ರ ಬಳಕೆಗೆಆದ್ಯತೆ ನೀಡಬೇಕು. ಕೃಷಿ ಇಲಾಖೆಯ ಅಧಿಕಾರಿಗಳು. ರೈತ ಸಂಪರ್ಕ ಕೇಂದ್ರಗಳು ಹಾಗೂ ಕೃಷಿ ವಿಜ್ಞಾನ ಕೇಂದ್ರಗಳ ತಾಂತ್ರಿಕ ಸಲಹೆಗಳನ್ನು ಪಡೆದು ಗೊಬ್ಬರ ಬಳಕೆ ಮಾಡಬೇಕು.

ಕಾಳಸಂತೆ. ಅಕ್ರಮ ಸಂಗ್ರಹಣೆ ಅಥವಾ ಅಧಿಕ ದರದಲ್ಲಿ ಗೊಬ್ಬರ ಮಾರಾಟದಂತಹ ಪ್ರಕರಣಗಳು ಕಂಡುಬಂದಲ್ಲಿ ತಕ್ಷಣ ಕೃಷಿ ಇಲಾಖೆ ಅಥವಾ ಜಿಲ್ಲಾ ಆಡಳಿತದ ಗಮನಕ್ಕೆ ತರಬೇಕು. ರೈತರಿಗೆ ಅಗತ್ಯ ಪ್ರಮಾಣದ ಗೊಬ್ಬರ ಲಭ್ಯವಾಗುವಂತೆ ಜಿಲ್ಲಾ ಆಡಳಿತ ಕ್ರಮ ಕೈಗೊಂಡಿದೆ. ಜಿಲ್ಲೆಯ ಎಲ್ಲಾ ರೈತರು ಸಮತೋಲಿತ ರಸಗೊಬ್ಬರಗಳ ಬಳಕೆ, ಸಾವಯವ ಕೃಷಿ ಪದ್ಧತಿಗಳ ಅಳವಡಿಕೆ ಹಾಗೂ ನ್ಯಾನೋ ಯೂರಿಯಾ ಬಳಕೆಯ ಮೂಲಕ ಮಣ್ಣಿನ ಆರೋಗ್ಯವನ್ನು ಕಾಪಾಡಿ ಸುಸ್ಥಿರ ಕೃಷಿಯತ್ತ ಹೆಜ್ಜೆ ಇಡಬೇಕು. ಮಣ್ಣಿನ ಆರೋಗ್ಯವೇ ಕೃಷಿಯ ಆಧಾರ - ಸಮತೋಲಿತ ಗೊಬ್ಬರ ಬಳಕೆ ನಮ್ಮ ಜವಾಬ್ದಾರಿ ಎಂದು ಗದಗ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಜಿಲ್ಲೆಯ ಸಮಸ್ತ ರೈತರಿಗೆ ಕರೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande