ಗ್ರಾಮ ಒನ್ ಸೇವಾ ಕೇಂದ್ರ - ಫ್ರಾಂಚೈಸಿಗಳ ನೇಮಕ
ಬಳ್ಳಾರಿ, 04 ಜೂನ್ (ಹಿ.ಸ.) : ಆ್ಯಂಕರ್ : ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ. ಜಿಲ್ಲೆಯ 05 ಗ್
ಗ್ರಾಮ ಒನ್ ಸೇವಾ ಕೇಂದ್ರ - ಫ್ರಾಂಚೈಸಿಗಳ ನೇಮಕ


ಬಳ್ಳಾರಿ, 04 ಜೂನ್ (ಹಿ.ಸ.) :

ಆ್ಯಂಕರ್ : ಸರ್ಕಾರದ ಇಡಿಸಿಎಸ್ ನಿರ್ದೇಶನಾಲಯದ ಇ-ಆಡಳಿತ ಇಲಾಖೆಯ ನಿರ್ದೇಶನದಂತೆ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಸೇವಾ ಕೇಂದ್ರಗಳಿಗೆ ಫ್ರಾಂಚೈಸಿಗಳನ್ನು ನೇಮಕ ಮಾಡಲು ಆಸಕ್ತ ಅರ್ಹ ಆಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಜಿಲ್ಲೆಯ 05 ಗ್ರಾಮ ಒನ್ ಕೇಂದ್ರಗಳಿಗೆ ಫ್ರಾಂಚೈಸಿಯನ್ನು ನೇಮಕ ಮಾಡಲು ಉದ್ದೇಶಿಸಲಾಗಿದೆ. ಬಳ್ಳಾರಿ ತಾಲ್ಲೂಕಿನ ಎಂ.ಗೋನಾಳ್, ಸಿರುಗುಪ್ಪ ತಾಲ್ಲೂಕಿನ ಬಲಕುಂದಿ, ಕೆ.ಬೆಳಗಲ್ಲು ಮತ್ತು ಸಂಡೂರು ತಾಲ್ಲೂಕಿನ ಸುಶೀಲನಗರ, ನರಸಿಂಗಪುರ ಗ್ರಾಮ ಪಂಚಾಯತಿಗಳು.

ಖಾಲಿಯಿರುವ ಗ್ರಾಮ ಒನ್ ಕೇಂದ್ರಗಳ ವಿವರ ಮತ್ತು ಅರ್ಜಿ ಸಲ್ಲಿಸಲು ಸೇವಾಸಿಂಧು ಪೋರ್ಟಲ್ https://sevasindhuservices.karnataka.gov.in/directApply.do?serviceld=2631 ಗೆ ಭೇಟಿ ನೀಡಬಹುದು. ನಾಗರೀಕ ಸೇವಾ ಕೇಂದ್ರ ಗ್ರಾಮ ಒನ್ ಫ್ರಾಂಚೈಸಿಯನ್ನು ಬಯಸುವವರು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ದಿನವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande