
ಬೆಂಗಳೂರು, 04 ಜೂನ್ (ಹಿ.ಸ.) :
ಆ್ಯಂಕರ್ : ರಾಜ್ಯದಾದ್ಯಂತ ಇಂದು ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ಆದರೆ ಮಧ್ಯಾಹ್ನದ ನಂತರ ಹಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣ ಉಂಟಾಗುವ ನಿರೀಕ್ಷೆಯಿದ್ದು, ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಧ್ಯಾಹ್ನ ಹಾಗೂ ಸಂಜೆ ವೇಳೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಮತ್ತು ಜೋರಾದ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲ ಪ್ರದೇಶಗಳಲ್ಲಿ ಭಾರಿ ಮಳೆಯೂ ಸುರಿಯಬಹುದೆಂದು ಮುನ್ಸೂಚನೆ ನೀಡಲಾಗಿದೆ.
ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯ ಚಟುವಟಿಕೆ ಹೆಚ್ಚು ಕಂಡು ಬರುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿಯೂ ಗುಡುಗು-ಸಿಡಿಲಿನೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ.
ಗುಡುಗು-ಸಿಡಿಲು ಮತ್ತು ಬಿರುಗಾಳಿಯ ಸಂದರ್ಭಗಳಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.
ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ವೇಳೆ ಹವಾಮಾನ ಮಾಹಿತಿಯನ್ನು ಗಮನದಲ್ಲಿಟ್ಟುಕೊಂಡು ಕ್ರಮ ವಹಿಸುವಂತೆ ಸೂಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.