ವಿದೇಶಗಳಿಗೆ, ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರಗಳಿಗೆ ಕಲಾತಂಡಗಳು ನೋಂದಣಿ
ನಾನಾ
ವಿದೇಶಗಳಿಗೆ, ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರಗಳಿಗೆ ಕಲಾತಂಡಗಳು ನೋಂದಣಿ


ಕೊಪ್ಪಳ, 04 ಜೂನ್ (ಹಿ.ಸ.) :

ಆ್ಯಂಕರ್ : ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (Indian Council for Cultural Relations - ICCR) ಹಾಗೂ ಕರ್ನಾಟಕ ಸರ್ಕಾರದ ನಡುವಿನ ಒಡಂಬಡಿಕೆಯಂತೆ ವಿದೇಶಗಳಿಗೆ ಹಾಗೂ ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರಗಳಿಗೆ ಕಲಾತಂಡಗಳನ್ನು ಕಳುಹಿಸುವ ಸಂಬಂಧ ನೋಂದಣಿ ಮಾಡಿಕೊಳ್ಳುವಂತೆ ಕೊಪ್ಪಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಕರ್ಣಕುಮಾರ ಅವರು ತಿಳಿಸಿದ್ದಾರೆ.

ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಪರಿಷತ್ (Indian Council for Cultural Relations - ICCR) ಹಾಗೂ ಕರ್ನಾಟಕ ಸರ್ಕಾರದ ನಡುವೆ ಸಂಸ್ಕೃತಿ ಕಲೆ ಹಾಗೂ ಶಿಕ್ಷಣಕ್ಕೆ ಸಂಬಂಧಿಸಿದಂತೆ ಒಡಂಬಡಿಕೆಯನ್ನು ಮಾಡಿಕೊಂಡಿರುತ್ತದೆ.

ಐಸಿಸಿಆರ್ ಸಂಸ್ಥೆಯ ವತಿಯಿಂದ ರಾಜ್ಯ ಸರ್ಕಾರದ ವತಿಯಿಂದ ಸಾಂಸ್ಕೃತಿಕ ಕಲಾ ತಂಡಗಳನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ನಾನಾ ಸಾಂಸ್ಕೃತಿಕ ಉತ್ಸವಗಳು ಹಾಗೂ ಕಾರ್ಯಕ್ರಮಗಳಿಗೆ ಕಳುಹಿಸಿಕೊಡುವ ಮೂಲಕ ಕಲಾ ತಂಡಗಳು ಮತ್ತು ಕಲಾವಿದರನ್ನು ಎಂಪನೆಲ್ ಮಾಡಲಾಗುತ್ತದೆ. ಇದರಿಂದ ಅವರ ಪ್ರತಿಭೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಚುರಪಡಿಸಲು ಅವಕಾಶ ದೊರೆಯುತ್ತದೆ.

ಆದ್ದರಿಂದ ಕೊಪ್ಪಳ ಜಿಲ್ಲೆಯ ಆಸಕ್ತ ಕಲಾವಿದರು ಹಾಗೂ ಕಲಾ ತಂಡಗಳು ನಿಗದಿತ ನಮೂನೆಯನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳ ಇವರಿಗೆ ಜೂನ್ 10 ರೊಳಗಾಗಿ ಸಲ್ಲಿಸಿ ನೋಂದಣಿಯಾಗುವಂತೆ ಈ ಮೂಲಕ ಕೋರಲಾಗಿದೆ.

ನೋಂದಣಿ ನಮೂನೆಯನ್ನು ಇಲಾಖೆಯ ವೆಬ್ಸೈಟ್ www.kannadasiri.karnataka.gov.in ನಲ್ಲಿ ಅಳವಡಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande