ವೆನೆಜುವೆಲಾ ಕಾರ್ಯನಿರ್ವಾಹಕ ಅಧ್ಯಕ್ಷೆ ಭೇಟಿಯಾದ ಜೈಶಂಕರ್
ನವದೆಹಲಿ, 04 ಜೂನ್ (ಹಿ.ಸ.) : ಆ್ಯಂಕರ್ : ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಗುರುವಾರ ನವದೆಹಲಿಯಲ್ಲಿ ವೆನೆಜುವೆಲಾದ ಕಾರ್ಯನಿರ್ವಾಹಕ ಅಧ್ಯಕ್ಷೆ ಡೆಲ್ಸಿ ರೊಡ್ರಿಗ್ವೆಜ್ ಅವರನ್ನು ಭೇಟಿ ಮಾಡಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹಾಗೂ ಸಹಕಾರ ವಿಸ್ತರಣೆ ಕುರಿತು ಚರ್ಚಿಸಿದರು. ಭೇಟಿಯ ಬಳಿಕ
Meet


ನವದೆಹಲಿ, 04 ಜೂನ್ (ಹಿ.ಸ.) :

ಆ್ಯಂಕರ್ : ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಗುರುವಾರ ನವದೆಹಲಿಯಲ್ಲಿ ವೆನೆಜುವೆಲಾದ ಕಾರ್ಯನಿರ್ವಾಹಕ ಅಧ್ಯಕ್ಷೆ ಡೆಲ್ಸಿ ರೊಡ್ರಿಗ್ವೆಜ್ ಅವರನ್ನು ಭೇಟಿ ಮಾಡಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹಾಗೂ ಸಹಕಾರ ವಿಸ್ತರಣೆ ಕುರಿತು ಚರ್ಚಿಸಿದರು.

ಭೇಟಿಯ ಬಳಿಕ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡ ಜೈಶಂಕರ್, “ಇಂದು ನವದೆಹಲಿಯಲ್ಲಿ ವೆನೆಜುವೆಲಾದ ಕಾರ್ಯನಿರ್ವಾಹಕ ಅಧ್ಯಕ್ಷೆ ಡೆಲ್ಸಿ ರೊಡ್ರಿಗ್ವೆಜ್ ಅವರನ್ನು ಭೇಟಿ ಮಾಡಿದ್ದು ಸಂತಸ ತಂದಿದೆ. ಭಾರತ–ವೆನೆಜುವೆಲಾ ಸಂಬಂಧಗಳ ಬಲವರ್ಧನೆಗೆ ಅವರು ದೀರ್ಘಕಾಲದಿಂದ ನೀಡುತ್ತಿರುವ ಕೊಡುಗೆಯನ್ನು ನಾನು ಮೆಚ್ಚುತ್ತೇನೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಅವರ ಭೇಟಿಯು ಉಭಯ ರಾಷ್ಟ್ರಗಳ ನಡುವಿನ ಸಹಕಾರವನ್ನು ಇನ್ನಷ್ಟು ಬಲಪಡಿಸಲಿದೆ” ಎಂದು ತಿಳಿಸಿದ್ದಾರೆ.

ಜೂನ್ 3ರಿಂದ 7ರವರೆಗೆ ಭಾರತ ಪ್ರವಾಸದಲ್ಲಿರುವ ಡೆಲ್ಸಿ ರೊಡ್ರಿಗ್ವೆಜ್ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಭಾರತ–ವೆನೆಜುವೆಲಾ ಸಂಬಂಧಗಳ ವಿವಿಧ ಆಯಾಮಗಳ ಕುರಿತು ಸಮಗ್ರ ಚರ್ಚೆ ನಡೆಯಲಿದ್ದು, ಇಂಧನ ಭದ್ರತೆ, ವ್ಯಾಪಾರ ಮತ್ತು ಹೂಡಿಕೆ, ಔಷಧೋದ್ಯಮ, ಆರೋಗ್ಯ ಸೇವೆ, ಸಾರಿಗೆ ಹಾಗೂ ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಸಹಕಾರ ವೃದ್ಧಿಯ ಸಾಧ್ಯತೆಗಳನ್ನು ಪರಿಶೀಲಿಸಲಾಗುವುದು.

ಉಭಯ ರಾಷ್ಟ್ರಗಳ ನಡುವೆ ಆರ್ಥಿಕ ಮತ್ತು ಕಾರ್ಯತಂತ್ರದ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ಮಾತುಕತೆಗಳು ಮಹತ್ವ ಪಡೆದಿವೆ. ವಿಶೇಷವಾಗಿ ಇಂಧನ ಕ್ಷೇತ್ರದಲ್ಲಿ ಪರಸ್ಪರ ಸಹಕಾರ ವಿಸ್ತರಣೆ ಹಾಗೂ ಹೊಸ ಹೂಡಿಕೆ ಅವಕಾಶಗಳ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಕಾರ್ಯನಿರ್ವಾಹಕ ಅಧ್ಯಕ್ಷೆಯ ನಿಯೋಗದಲ್ಲಿ ವಿದೇಶಾಂಗ, ಆರ್ಥಿಕತೆ ಮತ್ತು ಹಣಕಾಸು, ವಿಜ್ಞಾನ ಮತ್ತು ತಂತ್ರಜ್ಞಾನ, ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಹಾಗೂ ಸಾರಿಗೆ ಇಲಾಖೆಗಳ ಸಚಿವರು ಸೇರಿದಂತೆ ಉನ್ನತ ಮಟ್ಟದ ಪ್ರತಿನಿಧಿಗಳ ತಂಡವೂ ಭಾರತಕ್ಕೆ ಆಗಮಿಸಿದೆ.

ಡೆಲ್ಸಿ ರೊಡ್ರಿಗ್ವೆಜ್ ಅವರು ಈ ಹಿಂದೆ ವೆನೆಜುವೆಲಾದ ವಿದೇಶಾಂಗ ಸಚಿವೆ ಮತ್ತು ಉಪಾಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದ ವೇಳೆ ಹಲವು ಬಾರಿ ಭಾರತಕ್ಕೆ ಭೇಟಿ ನೀಡಿದ್ದರು. ಈ ಬಾರಿ ಅವರ ಆರನೇ ಭಾರತ ಪ್ರವಾಸವಾಗಿದ್ದು, ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ, ಆರ್ಥಿಕ ಮತ್ತು ವಾಣಿಜ್ಯ ಸಂಬಂಧಗಳನ್ನು ಇನ್ನಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವದ್ದಾಗಿದೆ.

ಭಾರತ ಮತ್ತು ವೆನೆಜುವೆಲಾ ನಡುವಿನ ಸಹಕಾರವು ಇತ್ತೀಚಿನ ವರ್ಷಗಳಲ್ಲಿ ವಿವಿಧ ಕ್ಷೇತ್ರಗಳಲ್ಲಿ ವಿಸ್ತರಿಸುತ್ತಿದ್ದು, ಈ ಉನ್ನತ ಮಟ್ಟದ ಭೇಟಿಯು ಎರಡೂ ದೇಶಗಳ ನಡುವಿನ ಬಾಂಧವ್ಯಕ್ಕೆ ಹೊಸ ಚೈತನ್ಯ ನೀಡುವ ನಿರೀಕ್ಷೆ ಮೂಡಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande