
ಬೆಂಗಳೂರು, 04 ಜೂನ್ (ಹಿ.ಸ.) :
ಆ್ಯಂಕರ್ : ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಅವರು ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿದರು.
ಭೇಟಿಯ ವೇಳೆ ಪಕ್ಷದ ಸಂಘಟನೆ, ರಾಜ್ಯದ ರಾಜಕೀಯ ಬೆಳವಣಿಗೆಗಳು ಹಾಗೂ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸುವ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು. ಮುಂಬರುವ ದಿನಗಳಲ್ಲಿ ಪಕ್ಷದ ಸಂಘಟನೆಗೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಕಾರ್ಯಕರ್ತರೊಂದಿಗೆ ಸಮನ್ವಯ ಸಾಧಿಸುವ ವಿಚಾರಗಳ ಬಗ್ಗೆಯೂ ಸಮಾಲೋಚನೆ ನಡೆಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh.M.B.