ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆಗೆ ಪ್ರಧಾನಿ ಮೋದಿ ಆತ್ಮೀಯ ಸ್ವಾಗತ
ನವದೆಹಲಿ, 04 ಜೂನ್ (ಹಿ.ಸ.) : ಆ್ಯಂಕರ್ : ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೋಡ್ರಿಗ್ಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಆತ್ಮೀಯ ಸ್ವಾಗತ ಕೋರಿದರು. ಭಾರತ ಪ್ರವಾಸದಲ್ಲಿರುವ ಡೆಲ್ಸಿ ರೋಡ್ರಿಗ್ಸ್ ಅವರೊಂದಿಗೆ ಪ್ರಧಾನಿ ಮೋದಿ ಮಹತ್ವದ ದ್
Well come


ನವದೆಹಲಿ, 04 ಜೂನ್ (ಹಿ.ಸ.) :

ಆ್ಯಂಕರ್ : ವೆನೆಜುವೆಲಾದ ಹಂಗಾಮಿ ಅಧ್ಯಕ್ಷೆ ಡೆಲ್ಸಿ ರೋಡ್ರಿಗ್ಸ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಆತ್ಮೀಯ ಸ್ವಾಗತ ಕೋರಿದರು. ಭಾರತ ಪ್ರವಾಸದಲ್ಲಿರುವ ಡೆಲ್ಸಿ ರೋಡ್ರಿಗ್ಸ್ ಅವರೊಂದಿಗೆ ಪ್ರಧಾನಿ ಮೋದಿ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮಾಹಿತಿ ಪ್ರಕಾರ, ಈ ಭೇಟಿಯ ಮುಖ್ಯ ಉದ್ದೇಶ ಭಾರತ ಮತ್ತು ವೆನೆಜುವೆಲಾ ನಡುವಿನ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸುವುದು ಹಾಗೂ ಉಭಯ ರಾಷ್ಟ್ರಗಳ ಸಂಬಂಧಗಳಿಗೆ ಹೊಸ ಚೈತನ್ಯ ನೀಡುವುದಾಗಿದೆ.

ಉಭಯ ದೇಶಗಳ ನಡುವಿನ ಮಾತುಕತೆಯಲ್ಲಿ ದ್ವಿಪಕ್ಷೀಯ ಸಂಬಂಧಗಳ ಎಲ್ಲಾ ಪ್ರಮುಖ ಅಂಶಗಳ ಕುರಿತು ಚರ್ಚೆ ನಡೆಯಲಿದೆ. ವಿಶೇಷವಾಗಿ ಇಂಧನ ಭದ್ರತೆ, ವ್ಯಾಪಾರ ಮತ್ತು ಹೂಡಿಕೆ, ಔಷಧೋದ್ಯಮ, ಆರೋಗ್ಯ ಸೇವೆ, ಸಾರಿಗೆ ಹಾಗೂ ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಸಹಕಾರವನ್ನು ವಿಸ್ತರಿಸುವ ಸಾಧ್ಯತೆಗಳ ಕುರಿತು ಸಮಾಲೋಚನೆ ನಡೆಸಲಾಗುತ್ತಿದೆ.

ಭಾರತದ ಇಂಧನ ಭದ್ರತೆಯ ದೃಷ್ಟಿಯಿಂದ ವೆನೆಜುವೆಲಾ ಪ್ರಮುಖ ರಾಷ್ಟ್ರಗಳಲ್ಲಿ ಒಂದಾಗಿದ್ದು, ತೈಲ ಮತ್ತು ಇಂಧನ ಕ್ಷೇತ್ರದ ಸಹಕಾರಕ್ಕೆ ಉಭಯ ದೇಶಗಳು ಹೆಚ್ಚಿನ ಆದ್ಯತೆ ನೀಡುತ್ತಿವೆ. ಇದೇ ಹಿನ್ನೆಲೆಯಲ್ಲಿ ಈ ಭೇಟಿಗೆ ವಿಶೇಷ ಮಹತ್ವ ಲಭಿಸಿದೆ.

ಡೆಲ್ಸಿ ರೋಡ್ರಿಗ್ಸ್ ಅವರು ಜೂನ್ 3ರಿಂದ 7ರವರೆಗೆ ಭಾರತ ಪ್ರವಾಸ ಕೈಗೊಂಡಿದ್ದಾರೆ. ಅವರು ಈ ಹಿಂದೆ ವೆನೆಜುವೆಲಾದ ವಿದೇಶಾಂಗ ಸಚಿವೆ ಹಾಗೂ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದ ವೇಳೆ ಹಲವು ಬಾರಿ ಭಾರತಕ್ಕೆ ಭೇಟಿ ನೀಡಿದ್ದರು. ಇದು ಅವರ ಆರನೇ ಭಾರತ ಭೇಟಿಯಾಗಿದೆ.

ಈ ಭೇಟಿ ಭಾರತ–ವೆನೆಜುವೆಲಾ ನಡುವಿನ ರಾಜತಾಂತ್ರಿಕ, ಆರ್ಥಿಕ ಮತ್ತು ವಾಣಿಜ್ಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವುದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಹೊಸ ಸಹಕಾರದ ಅವಕಾಶಗಳನ್ನು ಸೃಷ್ಟಿಸಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande