
ಕೊಪ್ಪಳ, 04 ಜೂನ್ (ಹಿ.ಸ.) :
ಆ್ಯಂಕರ್ : 2026-27ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿ/ವಿದ್ಯಾರ್ಥಿನಿಯರನ್ನು 6ನೇ ತರಗತಿಗೆ ಪ್ರತಿಷ್ಠಿತ ಶಾಲೆಗಳಿಗೆ ಪ್ರವೇಶ ಕಲ್ಪಿಸಲು ಪ್ರವೇಶ ಪರೀಕ್ಷೆಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಅರ್ಹ ವಿದ್ಯಾರ್ಥಿ/ವಿದ್ಯಾರ್ಥಿನಿಯರ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದ್ದು, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.
ಸಾರ್ವಜನಿಕರ ಮಾಹಿತಿಗಾಗಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ರವರ ಕಛೇರಿಯ ಮುಂಭಾಗದಲ್ಲಿ ಹಾಗೂ ಕೊಪ್ಪಳ ಜಿಲ್ಲಾ ವೆಬ್ ತಾಣ www.koppal.nic.in ದಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ದೂರುಗಳೇನಾದರೂ ಇದ್ದಲ್ಲಿ ಜೂನ್ 9 ರೊಳಗೆ ಜಿಲ್ಲಾ ಉಪನಿರ್ದೇಶಕರ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್