
ಕೊಪ್ಪಳ, 04 ಜೂನ್ (ಹಿ.ಸ.) :
ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿಗೆ ಖಾಲಿ ಇರುವ ವಿಷಯ ಶಿಕ್ಷಕರು ಹಾಗೂ ಉಪನ್ಯಾಸಕರ ಹುದ್ದೆಗಳಿಗೆ ಎದುರಾಗಿ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಜಿಲ್ಲಾ ಹಂತದಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ.
ಜಿಲ್ಲಾ ವೆಬ್ಸೈಟ್ www.koppal.nic.in ದಲ್ಲಿ “2026-27ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿರುವ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಬಗ್ಗೆ” ಎಂಬ ಶಿóರ್ಷಿಕೆಯಡಿಯಲ್ಲಿ ಪ್ರಕಟಿಸಲಾಗಿದ್ದು ವಿವರವಾದ ಮಾಹಿತಿಯನ್ನು ವೆಬ್ಸೈಟ್ ಮೂಲಕ ಪಡೆದುಕೊಳ್ಳಬಹುದು.
ಅರ್ಹ ಆಸಕ್ತ ಅಭ್ಯರ್ಥಿಗಳು ಜಿಲ್ಲಾ ವೆಬ್ಸೈಟ್ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಹಾಗೂ ಆಯ್ಕೆ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್