
ಕೊಪ್ಪಳ, 04 ಜೂನ್ (ಹಿ.ಸ.) :
ಆ್ಯಂಕರ್ : ಟಣಕನಕಲ್ನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಜೂನ್ 8 ರಂದು ಬೆಳಿಗ್ಗೆ 10 ಗಂಟೆಗೆ ವಿವಿಧ ವೃತ್ತಿಗಳ ಅಭ್ಯರ್ಥಿಗಳಿಗೆ ಉದ್ಯೋಗ ಹಾಗೂ ಶಿಶಿಕ್ಷು ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಏರ್ಪಡಿಸಲಾಗಿದೆ.
ಕ್ಯಾಂಪಸ್ ಸಂದರ್ಶನದಲ್ಲಿ ಪ್ರತಿಷ್ಠಿತ ಕಂಪನಿಯಾದ ಜಿಂದಾಲ್ ಸ್ಟೀಲ್ ವಕ್ರ್ಸ್ ಲಿಮಿಟೆಡ್, ತೋರಣಗಲ್-ಬಳ್ಳಾರಿ, ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಗಿಣಿಗೇರಾ-ಕೊಪ್ಪಳ, ಹೊಸಪೇಟ್ ಸ್ಟೀಲ್ಸ್ ಲಿಮಿಟೆಡ್, ಮುಕುಂದ ಸುಮಿ, ಕೋರಮಂಡಲ್ ಕೆಮಿಕಲ್ಸ್ ಹಾಗೂ ಕೊಪ್ಪಳ ಮೂಲದ ಇನ್ನಿತರೆ ಕೈಗಾರಿಕೆಗಳು ಭಾಗವಹಿಸುತ್ತಿದ್ದು ಐಟಿಐ ಪಾಸ್ ಆದ ಹಾಗೂ ಪ್ರಸ್ತುತ ಎರಡನೇ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ Electrician, Fitter, Turner, Mechanic Motor Vehicle, Mechanic Diesel, Tool & Die making & Welder, Machinist ವೃತ್ತಿಗಳ ಅಭ್ಯರ್ಥಿಗಳಿಗೆ ಉದ್ಯೋಗ ಹಾಗೂ ಶಿಶಿಕ್ಷು ತರಬೇತಿಗಾಗಿ ಕ್ಯಾಂಪಸ್ ಸಂದರ್ಶನವನ್ನು ಏರ್ಪಡಿಸಲಾಗಿರುತ್ತದೆ.
ಆಸಕ್ತರು ತಮ್ಮ ಆಧಾರ್ ಕಾರ್ಡ್, ಫೋಟೋ, ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಮೂಲ ದಾಖಲಾತಿಗಳು ಹಾಗೂ 2 ಸೆಟ್ ಝೆರಾಕ್ಸ್ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಿ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಪ್ರಾಚಾರ್ಯರು, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ, ಕೊಪ್ಪಳ (ಟಣಕನಕಲ್,
ಕುಷ್ಟಗಿ ರಸ್ತೆ, ಕೊಪ್ಪಳ) ಹಾಗೂ ಮೊಬೈಲ್ ಸಂ: 7483165641, 9008536895, 9448813422, 9945577155, 9742532353, 9945672606 ಇವರಿಗೆ ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್