ಹಿಂದುಳಿದ ವರ್ಗಗಳ ಕಾನೂನು ಪದವೀಧರರ ತರಬೇತಿ : ಅರ್ಜಿ ಆಹ್ವಾನ
ಬಳ್ಳಾರಿ, 04 ಜೂನ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಕಾನೂನು ತರಬೇತಿ ಭತ್ಯೆಗಾಗಿ ಅರ್ಹ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದ
ಹಿಂದುಳಿದ ವರ್ಗಗಳ ಕಾನೂನು ಪದವೀಧರರ ತರಬೇತಿ : ಅರ್ಜಿ ಆಹ್ವಾನ


ಬಳ್ಳಾರಿ, 04 ಜೂನ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2026-27ನೇ ಸಾಲಿನಲ್ಲಿ ಕಾನೂನು ತರಬೇತಿ ಭತ್ಯೆಗಾಗಿ ಅರ್ಹ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಜಲಾಲಪ್ಪ ಅವರು ತಿಳಿಸಿದ್ದಾರೆ.

ತರಬೇತಿ ಭತ್ಯೆ ಪಡೆಯಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಜುಲೈ 03 ಕೊನೆಯ ದಿನವಾಗಿದೆ.

ಪ್ರಮುಖ ನಿಬಂಧನೆ ಮತ್ತು ಅರ್ಹತೆ:

ಅಭ್ಯರ್ಥಿಯು ಬಳ್ಳಾರಿ ಜಿಲ್ಲೆಯ ನಿವಾಸಿಯಾಗಿರಬೇಕು ಹಾಗೂ ಹಿಂದುಳಿದ ವರ್ಗಗಳ ಪ್ರವರ್ಗ-1, ಪ್ರವರ್ಗ-2(ಎ), ಪ್ರವರ್ಗ-3(ಎ) ಮತ್ತು ಪ್ರವರ್ಗ-3(ಬಿ) ಗೆ ಸೇರಿದವರಾಗಿರಬೇಕು. ಬಾರ್ ಕೌನ್ಸಿಲ್ನಲ್ಲಿ ಕಡ್ಡಾಯವಾಗಿ ಹೆಸರು ನೋಂದಾಯಿಸಿರಬೇಕು ಮತ್ತು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಗರಿಷ್ಠ 2 ವರ್ಷಗಳ ಒಳಗಾಗಿ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ವಯೋಮಿತಿ ಇರಬೇಕು. ವಾರ್ಷಿಕ ಆದಾಯದ ಮಿತಿ ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ. 3.50 ಲಕ್ಷ ಹಾಗೂ ಪ್ರವರ್ಗ-2ಎ, 3ಎ, 3ಬಿ ಅಭ್ಯರ್ಥಿಗಳಿಗೆ ರೂ. 2.50 ಲಕ್ಷಗಳಾಗಿರಬೇಕು.

ಆಯ್ಕೆಯಾದ ಒಟ್ಟು 10 ಅಭ್ಯರ್ಥಿಗಳಿಗೆ 4 ವರ್ಷಗಳ ಅವಧಿಗೆ ಮಾಸಿಕ ರೂ. 4,000/- ಗಳ ತರಬೇತಿ ಭತ್ಯೆ ನೀಡಲಾಗುವುದು. ತರಬೇತಿಯನ್ನು ಮಧ್ಯದಲ್ಲಿ ಕೈಬಿಟ್ಟರೆ ಭತ್ಯೆಯ ಹಣವನ್ನು ಬಡ್ಡಿಯೊಂದಿಗೆ ಮರುಪಾವತಿಸಬೇಕಾಗುತ್ತದೆ.

ಒಟ್ಟು 10 ಸೀಟುಗಳಲ್ಲಿ ಪ್ರವರ್ಗ-1 ಕ್ಕೆ 2, ಪ್ರವರ್ಗ-2(ಎ) ಕ್ಕೆ 5, ಪ್ರವರ್ಗ-3(ಎ) ಕ್ಕೆ 1 ಹಾಗೂ ಪ್ರವರ್ಗ-3(ಬಿ) ಅಭ್ಯರ್ಥಿಗಳಿಗೆ 2 ಸೀಟುಗಳನ್ನು ಮೀಸಲಿಡಲಾಗಿದೆ.

ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯಿಂದ ಸಂದರ್ಶನದ ಮೂಲಕ ಅರ್ಹರನ್ನು ಆಯ್ಕೆ ಮಾಡಿ, ಕನಿಷ್ಠ 15 ವರ್ಷಗಳ ವೃತ್ತಿ ಅನುಭವ ಹೊಂದಿರುವ ಹಿರಿಯ ವಕೀಲರು ಅಥವಾ ಸರ್ಕಾರಿ ವಕೀಲರ ಅಧೀನದಲ್ಲಿ ತರಬೇತಿಗೆ ನಿಯೋಜಿಸಲಾಗುವುದು.

ಅರ್ಜಿಯೊಂದಿಗೆ ಎಸ್ಎಸ್ಎಲ್ಸಿ ಅಂಕಪಟ್ಟಿ/ವರ್ಗಾವಣೆ ಪ್ರಮಾಣ ಪತ್ರ, ಪದವಿ ಮತ್ತು ಕಾನೂನು ಪದವಿಗಳ ಅಂಕಪಟ್ಟಿಗಳ ದೃಢೀಕೃತ ನಕಲು ಪ್ರತಿಗಳನ್ನು ಲಗತ್ತಿಸಬೇಕು.

ಅರ್ಜಿ ನಮೂನೆಯನ್ನು ಬಳ್ಳಾರಿ ಜಿಲ್ಲಾ ಪಂಚಾಯತ್ ಅಧಿಕೃತ ಜಾಲತಾಣ ತಿತಿತಿ.bಚಿಟಟಚಿಡಿi.ಟಿiಛಿ.iಟಿ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು.

ಅಥವಾ ‘ಜಿಲ್ಲಾ ಅಧಿಕಾರಿಗಳ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಡಿ.ದೇವರಾಜ ಅರಸು ಭವನ, ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರ, ಬಳ್ಳಾರಿ’ ಇಲ್ಲಿಗೆ ಕಛೇರಿ ವೇಳೆಯಲ್ಲಿ ಭೇಟಿ ನೀಡಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.08392-275751 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande