
ಕೂಡ್ಲಿಗಿ, 04 ಜೂನ್ (ಹಿ.ಸ.) :
ಆ್ಯಂಕರ್: ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಇಂದು ಆಗಮಿಸಿ ನಾಳೆ 5 ಜಿಲ್ಲೆಯ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
ಇಂದು ರಾತ್ರಿ 8:30 ಹೊಸಪೇಟೆಗೆ ಆಗಮಿಸಿ ವೈಕುಂಠ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡುವರು.
ನಾಳೆ ಬೆಳಗ್ಗೆ 8.30 ರಿಂದ 9.30 ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಹತ್ತಿರವಿರದ ಟಿ.ಬಿ. ಡ್ಯಾಂ ರಸ್ತೆಯಲ್ಲಿ ನಿರ್ಮಾಣವಾಗಲಿರುವ ನೂತನ ರಂಗಮಂದಿರದ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಚಿಕ್ಕಜೋಗಿಹಳ್ಳಿಯಲ್ಲಿ ಪ್ರಧಾನ ಮಂತ್ರಿಯವರ ಕರೆ ನೀಡಿರುವ 'ಏಕ್ ಪೇಡ್ ಮಾ ಕೆ ನಾಮ್' ಅಭಿಯಾನದಡಿ ಸಾವಯವ ತೋಟಗಾರಿಕಾ ಹಣ್ಣಿನ ಗಿಡಗಳ ನೆಡುವಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ನಂತರ ಮಧ್ಯಾಹ್ನ 1.30ಕ್ಕೆ ಬೆಂಗಳೂರಿಗೆ ಪ್ರಯಾಣಿಸುವರು.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್