‘ಬ್ರ್ಯಾಂಡ್ ಬೆಂಗಳೂರು’ ಹೆಸರಿನಲ್ಲಿ ನಗರ ಹಾಳು : ಆರ್. ಅಶೋಕ್
ಬೆಂಗಳೂರು, 04 ಜೂನ್ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ರಸ್ತೆ ಗುಂಡಿಗಳು ಮತ್ತು ಮೂಲಸೌಕರ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲ
ಅಶೋಕ


ಬೆಂಗಳೂರು, 04 ಜೂನ್ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ರಸ್ತೆ ಗುಂಡಿಗಳು ಮತ್ತು ಮೂಲಸೌಕರ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಬ್ರ್ಯಾಂಡ್ ಬೆಂಗಳೂರು ಎಂದು ಹೇಳಿಕೊಂಡವರು, ಬೆಂಗಳೂರನ್ನೇ ಗುಂಡಿಗಳ ಬ್ರ್ಯಾಂಡ್ ಮಾಡಿದ್ದಾರೆ” ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ‘ಬ್ರ್ಯಾಂಡ್ ಬೆಂಗಳೂರು’ ಎಂದರೆ ಜಾಹೀರಾತು, ಪ್ರಚಾರ ಮತ್ತು ವೈಯಕ್ತಿಕ ವರ್ಚಸ್ಸು ಹೆಚ್ಚಿಸಿಕೊಳ್ಳುವುದಷ್ಟೇ ಎಂಬ ಆರೋಪ ಮಾಡಿದ ಅಶೋಕ್, ಅಕಾಲಿಕ ಮಳೆಯ ನಂತರ ಸಿಲಿಕಾನ್ ಸಿಟಿಯ ರಸ್ತೆಗಳು ಗುಂಡಿಗಳ ಗೂಡಾಗಿ ಮಾರ್ಪಟ್ಟಿದ್ದು, ಸಾರ್ವಜನಿಕರ ಜೀವಕ್ಕೆ ಅಪಾಯ ಉಂಟುಮಾಡಿವೆ ಎಂದು ಹೇಳಿದ್ದಾರೆ.

ಶಾಲೆಗೆ ತೆರಳುವ ಮಕ್ಕಳು, ಉದ್ಯೋಗಿಗಳು, ಆಟೋ ಮತ್ತು ಕ್ಯಾಬ್ ಚಾಲಕರು ಸೇರಿದಂತೆ ವಾಹನ ಸವಾರರು ಪ್ರತಿದಿನ ಸಂಕಷ್ಟ ಅನುಭವಿಸುತ್ತಿದ್ದಾರೆ. ರಸ್ತೆ ದುರಸ್ತಿ ಕಾರ್ಯಗಳಿಗೆ ಆದ್ಯತೆ ನೀಡುವ ಬದಲು ಕಾಂಗ್ರೆಸ್ ಸರ್ಕಾರವು ಬೇರೆ ವಿಚಾರಗಳತ್ತ ಗಮನ ಹರಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ತಮ್ಮ ರಾಜಕೀಯ ಬ್ರ್ಯಾಂಡ್ ನಿರ್ಮಿಸಿಕೊಂಡ ಡಿ.ಕೆ. ಶಿವಕುಮಾರ್, ಈಗ ಬೆಂಗಳೂರಿನ ಬ್ರ್ಯಾಂಡ್ನ್ನೇ ಮಣ್ಣಿನಲ್ಲಿ ಮಿಶ್ರಣ ಮಾಡಿದ್ದಾರೆ ಎಂದು ಅಶೋಕ್ ಟೀಕಿಸಿದ್ದಾರೆ.

ರಾಜ್ಯದ ಮೂಲಸೌಕರ್ಯ ವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದರೂ ಸರ್ಕಾರ ಕಣ್ಮುಚ್ಚಿ ಕುಳಿತಿದೆ ಎಂದು ಆರೋಪಿಸಿರುವ ಅವರು, ಬೆಂಗಳೂರಿನ ರಸ್ತೆ ಮತ್ತು ನಾಗರಿಕ ಸೌಲಭ್ಯಗಳ ಸಮಸ್ಯೆಗಳನ್ನು ತಕ್ಷಣ ಪರಿಹರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande