
ಬಳ್ಳಾರಿ, 04 ಜೂನ್ (ಹಿ.ಸ.) :
ಆ್ಯಂಕರ್ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜೂ.05 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ನ್ಯಾಯಾಲಯದ ಸಂಕೀರ್ಣದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ವಸತಿಗೃಹ ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ಸಸಿಗಳನ್ನು ನೆಡುವುದರ ಮೂಲಕ ‘ವಿಶ್ವ ಪರಿಸರ ದಿನಾಚರಣೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್