ವಿಶ್ವ ಪರಿಸರ ದಿನಾಚರಣೆ : ನಾಳೆ ದಾವಣಗೆರೆಯಲ್ಲಿ ವಿಶೇಷ ಗಿಡ ವಿತರಣಾ ಕಾರ್ಯಕ್ರಮ
ದಾವಣಗೆರೆ, 04 ಜೂನ್ (ಹಿ.ಸ.) : ಆ್ಯಂಕರ್ : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ನಾಳೆ ದಾವಣಗೆರೆಯಲ್ಲಿ ವಿಶೇಷ ಗಿಡ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾಮಾಜಿಕ ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ದಾವಣಗೆರೆ ಮಹಾನಗರ ಪಾ
Invitation


ದಾವಣಗೆರೆ, 04 ಜೂನ್ (ಹಿ.ಸ.) :

ಆ್ಯಂಕರ್ : ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ನಿರ್ಮಾಣದ ಉದ್ದೇಶದಿಂದ ನಾಳೆ ದಾವಣಗೆರೆಯಲ್ಲಿ ವಿಶೇಷ ಗಿಡ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಸಾಮಾಜಿಕ ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ ಹಾಗೂ ದಾವಣಗೆರೆ ಮಹಾನಗರ ಪಾಲಿಕೆಗಳ ಸಂಯುಕ್ತ ಆಶ್ರಯದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಸರ್ಕಾರಿ ಸಂಸ್ಥೆಗಳ ಆವರಣಗಳಲ್ಲಿ ಗಿಡಗಳನ್ನು ವಿತರಿಸಿ ನೆಡುವ ಕಾರ್ಯ ಕೈಗೊಳ್ಳಲಾಗುತ್ತದೆ.

ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳು, ಕಾಲೇಜುಗಳು, ಆಸ್ಪತ್ರೆಗಳು, ಪಶು ಆಸ್ಪತ್ರೆಗಳು, ಗ್ರಾಮ ಪಂಚಾಯಿತಿಗಳು ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಆವರಣಗಳಿಗೆ ಭೇಟಿ ನೀಡಿ ಗಿಡಗಳನ್ನು ವಿತರಿಸಲಾಗುವುದು. ಪರಿಸರ ಜಾಗೃತಿ ಮೂಡಿಸುವ ಜೊತೆಗೆ ಹಸಿರು ಪರಿಸರ ನಿರ್ಮಾಣಕ್ಕೆ ಉತ್ತೇಜನ ನೀಡುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.

ಈ ಕುರಿತು ಮಾಹಿತಿ ನೀಡಿರುವ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ ಶಾಮನೂರು, ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ. ಗಿಡ ನೆಡುವ ಮೂಲಕ ಪರಿಸರ ಸಮತೋಲನ ಕಾಪಾಡಲು ಎಲ್ಲರೂ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದ್ದಾರೆ.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಶಾಸಕ ಸಮರ್ಥ ಶಾಮನೂರು ಮನವಿ ಮಾಡಿದ್ದಾರೆ. ಹಸಿರು ಭವಿಷ್ಯಕ್ಕಾಗಿ ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡ ನೆಟ್ಟು ಅದರ ಪೋಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande