ವಿಶ್ವ ಪರಿಸರ ದಿನಾಚರಣೆ : ಬಳ್ಳಾರಿಯಲ್ಲಿ 5,000 ಸಸಿ ನೆಡುವ ಕಾರ್ಯಕ್ರಮಕ್ಕೆ ಡಿಸಿ ನಾಗೇಂದ್ರ ಪ್ರಸಾದ್.ಕೆ ಚಾಲನೆ
ಬಳ್ಳಾರಿ, 05 ಜೂನ್ (ಹಿ.ಸ.) : ಆ್ಯಂಕರ್ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಕೆಎಂಆರ್ಸಿ, ಅರಣ್ಯ ಇಲಾಖೆಯ ಜಂಟಿ ಸಹಯೋಗದಲ್ಲಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದ ಆವರಣದಲ್ಲಿ ಶುಕ್ರವಾರ ಬೃಹತ್ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನಾಗೇ
5,000 sapling planting program initiated by DC Nagendra Prasad


5,000 sapling planting program initiated by DC Nagendra Prasad


5,000 sapling planting program initiated by DC Nagendra Prasad


ಬಳ್ಳಾರಿ, 05 ಜೂನ್ (ಹಿ.ಸ.) :

ಆ್ಯಂಕರ್ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಕೆಎಂಆರ್ಸಿ, ಅರಣ್ಯ ಇಲಾಖೆಯ ಜಂಟಿ ಸಹಯೋಗದಲ್ಲಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದ ಆವರಣದಲ್ಲಿ ಶುಕ್ರವಾರ ಬೃಹತ್ ಸಸಿ ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಚಾಲನೆ ನೀಡಿದರು.

ಗಿಡ ನೆಟ್ಟು ನೀರೂಣಿಸಿದ ಬಳಿಕ ಮಾತನಾಡಿದ ಅವರು, ಪ್ರಸಕ್ತ ವರ್ಷದಲ್ಲಿ ಬಳ್ಳಾರಿ ನಗರದಲ್ಲಿ ಒಟ್ಟು 5,000 ಸಸಿಗಳನ್ನು ನೆಡುವ ಮಹತ್ತರ ಉದ್ದೇಶವನ್ನು ಹೊಂದಲಾಗಿದ್ದು, ಅಧಿಕೃತವಾಗಿ ಚಾಲನೆ ನೀಡಲಾಗಿದೆ ಎಂದರು.

ಬಳ್ಳಾರಿಯ ಪ್ರತಿಯೊಬ್ಬ ನಾಗರಿಕರು ಕನಿಷ್ಠ ಒಂದು ಗಿಡವನ್ನು ನೆಟ್ಟು, ಅದನ್ನು ಪೋಷಿಸಿ ಬೆಳೆಸಬೇಕು. ಮುಂದಿನ ಪೀಳಿಗೆಗೆ ನಾವು ನೀಡಬಹುದಾದ ಅತ್ಯಂತ ದೊಡ್ಡ ಕೊಡುಗೆ ಎಂದರೆ ಅದು ಪರಿಸರ ಸಂರಕ್ಷಣೆ ಮಾತ್ರ ಎಂದು ಕರೆ ನೀಡಿದರು.

ಇದೇ ವೇಳೆ ಗಣ್ಯರು ರೇಡಿಯೋ ಪಾರ್ಕ್ ಪ್ರದೇಶದ ಸರ್ಕಾರಿ ಕೈಗಾರಿಕಾ ತರಬೇತಿ ಕೇಂದ್ರದ ಆವರಣದಲ್ಲಿ ಗಿಡಗಳನ್ನು ನೆಟ್ಟು ನೀರೂಣಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪೆನ್ನೇಕರ್, ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ.ಎನ್ ಬಸವರಾಜ, ಹಿರಿಯರಾದ ಎಸ್.ಆರ್. ಹೀರೆಮಠ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಾರ್ವಜನಿಕರು ಹಾಗೂ ಇನ್ನೀತರರು ಇದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande