
ಬಳ್ಳಾರಿ, 05 ಜೂನ್ (ಹಿ.ಸ.) :
ಆ್ಯಂಕರ್ : ದ್ವಿ ಚಕ್ರ ವಾಹನ ಸವಾರರಿಗೆ ಪೊಲೀಸರು ಹೆಲ್ಮೆಟ್ ತಪಾಸಣೆ ನಡೆಸುತ್ತಿರುವುದನ್ನು ಗಮನಿಸಿದ ಜೋಳದರಾಶಿ ಗ್ರಾಮ ನಿವಾಸಿ ದ್ವಿ ಚಕ್ರ ವಾಹನ ಸವಾರ ಜೋಳದರಾಶಿ ವೀರೇಶ್ (28) ಟಿಪ್ಪರ್ ಕೆಳಕ್ಕೆ ಬಿದ್ದು, ಸ್ಥಳದಲ್ಲೇ ಮೃತಪಟ್ಟ ಘಟನೆ ಗವಿಯಪ್ಪ ವೃತ್ತದಲ್ಲಿ ಶುಕ್ರವಾರ ನಡೆದಿದೆ.
ದ್ವಿಚಕ್ರ ವಾಹನ ಸವಾರನು ಹೆಲ್ಮೆಟ್ ಧರಿಸದೇ ಬಳ್ಳಾರಿ ನಗರಕ್ಕೆ ಆಗಮಿಸಿ, ಪೊಲೀಸರು ಹೆಲ್ಮೆಟ್ ತಪಾಸಣೆ ಮಾಡುತ್ತಿರುವ ಕಾರಣ ಅವರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಈ ಘಟನೆ ನಡೆದಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.
ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಟಿಪ್ಪರ್ ಲಾರಿ ಚಾಲಕನು ಸ್ಥಳದಲ್ಲೇ ಲಾರಿಯನ್ನು ಬಿಟ್ಟು ಪರಾರಿ ಆಗಿದ್ದಾನೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್