
ನವದೆಹಲಿ, 05 ಜೂನ್ (ಹಿ.ಸ.) :
ಆ್ಯಂಕರ್ : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ನಾಶದ ವಿರುದ್ಧ ನಾನು ಪೂರ್ಣ ಶಕ್ತಿಯೊಂದಿಗೆ ನಿಲ್ಲುತ್ತೇನೆ. ಈ ದ್ವೀಪಗಳು ಭಾರತದ ಅತ್ಯಂತ ಅಮೂಲ್ಯವಾದ ನೈಸರ್ಗಿಕ ಸಂಪತ್ತಾಗಿದ್ದು, ಅವುಗಳನ್ನು ಪ್ರಸ್ತುತ ಹಾಗೂ ಭವಿಷ್ಯದ ಪೀಳಿಗೆಗಾಗಿ ರಕ್ಷಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತು ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪರಿಸರ ಹಾಗೂ ನೈಸರ್ಗಿಕ ಸಂಪತ್ತಿನ ಸಂರಕ್ಷಣೆಗಾಗಿ ನಡೆಯುತ್ತಿರುವ ಹೋರಾಟಕ್ಕೆ ಜನರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಬೆಂಬಲ ಪತ್ರ ಬಿಡುಗಡೆ ಮಾಡಿದ್ದು, “ನನ್ನೊಂದಿಗೆ ಸೇರಿ ಅರ್ಜಿಗೆ ಸಹಿ ಮಾಡಿ ಮತ್ತು ಈ ಅಮೂಲ್ಯ ನೈಸರ್ಗಿಕ ಆಸ್ತಿಯನ್ನು ಉಳಿಸುವ ಹೋರಾಟದ ಭಾಗವಾಗಿರಿ” ಎಂದು ಅವರು ಕರೆ ನೀಡಿದ್ದಾರೆ.
ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಪರಿಸರ ಸಂರಕ್ಷಣೆ ಕುರಿತ ಚರ್ಚೆ ಹಾಗೂ ಆತಂಕಗಳ ನಡುವೆ ರಾಹುಲ್ ಗಾಂಧಿ ಈ ಅಭಿಯಾನಕ್ಕೆ ಸಾರ್ವಜನಿಕ ಬೆಂಬಲ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh.M.B.