ಕೊಪ್ಪಳ, ಕುಷ್ಟಗಿ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕೊಪ್ಪಳ, 05 ಜೂನ್ (ಹಿ.ಸ.) : ಆ್ಯಂಕರ್ : 2026-27ನೇ ಸಾಲಿಗಾಗಿ ಕೊಪ್ಪಳ ಮತ್ತು ಕುಷ್ಟಗಿ ತಾಲ್ಲೂಕಿನಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳಲ್ಲಿ (ಪಿ.ಯು.ಸಿ, ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ
ಕೊಪ್ಪಳ, ಕುಷ್ಟಗಿ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ


ಕೊಪ್ಪಳ, 05 ಜೂನ್ (ಹಿ.ಸ.) :

ಆ್ಯಂಕರ್ : 2026-27ನೇ ಸಾಲಿಗಾಗಿ ಕೊಪ್ಪಳ ಮತ್ತು ಕುಷ್ಟಗಿ ತಾಲ್ಲೂಕಿನಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳಲ್ಲಿ (ಪಿ.ಯು.ಸಿ, ಡಿಪ್ಲೋಮಾ ಹಾಗೂ ಐ.ಟಿ.ಐ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಕೊಪ್ಪಳ ಮತ್ತು ಕುಷ್ಟಗಿ ತಾಲ್ಲೂಕಿನಲ್ಲಿರುವ ಅಲ್ಪಸಂಖ್ಯಾತರ ಮೆಟ್ರಿಕ್ ನಂತರದ ಬಾಲಕ, ಬಾಲಕಿಯರ ವಸತಿ ನಿಲಯಗಳ ಪ್ರವೇಶ ಬಯಸುವ ಅರ್ಹ ಅಭ್ಯರ್ಥಿಗಳು ರಾಜ್ಯ ವಿದ್ಯಾರ್ಥಿನಿಲಯ ತಂತ್ರಾಂಶ ಎಸ್.ಹೆಚ್.ಪಿ (ಸ್ಟೇಟ್ ಹಾಸ್ಟೇಲ್ ಪೋರ್ಟಲ್) ಆನ್ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದ್ದು, ಇದಕ್ಕಾಗಿ ವೆಬ್ಸೈಟ್ https://shp.karnataka.gov.in/ ನಲ್ಲಿ ಜೂನ್ 30ರ ಒಳಗಾಗಿ ಅರ್ಜಿ ಸಲ್ಲಿಸಿ ವಸತಿ ನಿಲಯಗಳ ಸೌಲಭ್ಯವನ್ನು ಪಡೆದುಕೊಳ್ಳಬೇಕು.

ಆಲ್ಲೈನ್ ಅರ್ಜಿಗಳನ್ನು ಸಲ್ಲಿಸಿ ಅರ್ಜಿ ಪ್ರತಿ ಹಾಗೂ ಎಲ್ಲಾ ದಾಖಲೆಗಳನ್ನು ಸಂಬಂಧಿಸಿದ ವಸತಿ ನಿಲಯಗಳಿಗೆ ನೀಡಬೇಕು. ಕೊನೆಯ ದಿನಾಂಕದ ನಂತರ ಸ್ವೀಕೃತವಾಗುವ ಯಾವುದೇ ಅರ್ಜಿ ಅಥವಾ ಕೋರಿಕೆಗಳನ್ನು ಪರಿಗಣಿಸಲು ಅವಕಾಶವಿರುವುದಿಲ್ಲ ಎಂದು ಕೊಪ್ಪಳ ತಾಲ್ಲೂಕು ಅಲ್ಪಸಂಖ್ಯಾತರ ವಿಸ್ತರಣಾಧಿಕಾರಿಗಳಾದ ರವಿ ಪೂಜಾರ ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande