
ಕೋಲಾರ, ಜೂನ್ ೦೫ (ಹಿ.ಸ) :
ಆ್ಯಂಕರ್ : ಪ್ರಸಕ್ತ ಸಾಲಿನ ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿಯ ಎಸ್.ಎಫ್.ಸಿ ಮುಕ್ತನಿಧಿಯಡಿಯಲ್ಲಿ ಪರಿಶಿಷ್ಟ ಜಾತಿ ಶೇ.೧೭.೧೫%ರ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗ ಯೋಜನೆಯಡಿ ಇತರೆ ಶೇ.೭.೨೫%ರ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರಿಗೆ ಸಹಾಯಧನಕ್ಕಾಗಿ ಪ್ರಸಕ್ತ ಸಾಲಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮೂಲ ವ್ಯಾಸಂಗ ಪ್ರಮಾಣ ಪತ್ರ. ೨೦೨೫-೨೬ನೇ ಸಾಲಿನಲ್ಲಿ ವ್ಯಾಸಂಗ ಮಾಡಿರುವ ಕುರಿತು ಅಂಕಪಟ್ಟಿ. ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಆಧಾರ್ ಕಾರ್ಡ್, ಶಾಲಾ ಗುರುತಿನ ಚೀಟಿ, ಪಡಿತರ ಚೀಟಿ, ಬ್ಯಾಂಕ್ ಪಾಸ್ ಪುಸ್ತಕ ಪ್ರತಿ ಹಾಗೂ ಎರಡು ಭಾವ ಚಿತ್ರಗಳನ್ನು ಸಲ್ಲಿಸಬೇಕು.
ಅರ್ಹ ಫಲಾನುಭವಿಗಳು ಸೂಕ್ತ ದಾಖಲೆಗಳನ್ನು ನಿಗದಿತ ಅರ್ಜಿ ನಮೂನೆಯೊಂದಿಗೆ ಜೂನ್ ೩೦ ಸಂಜೆ ೫.೦೦ ಗಂಟೆಯೊಳಗೆ ಈ ಕಛೇರಿಗೆ ಸಲ್ಲಿಸಬಹುದು. ಅವಧಿ ಮೀರಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿ ನಮೂನೆಗಳಿಗಾಗಿ ಮೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿಯ ಕಲ್ಯಾಣ ಶಾಖೆ ಸಿಬ್ಬಂದಿಯನ್ನು ಸಂಪರ್ಕಿಸಬಹುದೆAದು ಪಂಚಾಯಿತಿಯ ಮುಖ್ಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್