ಹಸಿರು ಭವಿಷ್ಯಕ್ಕಾಗಿ ಎಲ್ಲರೂ ಕೈಜೋಡಿಸೋಣ : ಜೈಶಂಕರ್
ನವದೆಹಲಿ, 05 ಜೂನ್ (ಹಿ.ಸ.) : ಆ್ಯಂಕರ್ : ವಿಶ್ವ ಪರಿಸರ ದಿನದ ಅಂಗವಾಗಿ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದು, ಪರಿಸರ ಸಂರಕ್ಷಣೆ ಮತ್ತು ಹವಾಮಾನ ಬದಲಾವಣೆಯ ವಿರುದ್ಧದ ಹೋರಾಟದಲ್ಲಿ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. ಸಾಮಾಜಿಕ ಜಾಲತಾಣ
ಜೈಶಂಕರ


ನವದೆಹಲಿ, 05 ಜೂನ್ (ಹಿ.ಸ.) :

ಆ್ಯಂಕರ್ : ವಿಶ್ವ ಪರಿಸರ ದಿನದ ಅಂಗವಾಗಿ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದು, ಪರಿಸರ ಸಂರಕ್ಷಣೆ ಮತ್ತು ಹವಾಮಾನ ಬದಲಾವಣೆಯ ವಿರುದ್ಧದ ಹೋರಾಟದಲ್ಲಿ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಹವಾಮಾನ ಕ್ರಮಗಳನ್ನು ಮುಂದುವರಿಸುವಲ್ಲಿ ಹಾಗೂ ಪರಿಸರ ಜವಾಬ್ದಾರಿಯುತ ಜೀವನಶೈಲಿಯನ್ನು ಉತ್ತೇಜಿಸುವಲ್ಲಿ ಭಾರತ ದೃಢ ಸಂಕಲ್ಪ ಹೊಂದಿದೆ ಎಂದು ಹೇಳಿದ್ದಾರೆ.

ಜೀವನಶೈಲಿಯಲ್ಲಿ ಪರಿಸರ ಸ್ನೇಹಿ ಬದಲಾವಣೆಗಳನ್ನು ಉತ್ತೇಜಿಸುವ ‘ಮಿಷನ್ ಲೈಫ್’, ಸೌರಶಕ್ತಿಯ ಬಳಕೆಯನ್ನು ವಿಸ್ತರಿಸುವ ಅಂತಾರಾಷ್ಟ್ರೀಯ ಸೌರ ಒಕ್ಕೂಟ, ಜೈವಿಕ ಇಂಧನಗಳ ಬಳಕೆಗೆ ಉತ್ತೇಜನ ನೀಡುವ ಜಾಗತಿಕ ಜೈವಿಕ ಇಂಧನ ಒಕ್ಕೂಟ ಹಾಗೂ ಪ್ರಕೃತಿ ವಿಕೋಪಗಳಿಗೆ ತಡೆಯೊಡ್ಡುವ ಮೂಲಸೌಕರ್ಯಗಳ ನಿರ್ಮಾಣಕ್ಕೆ ಒತ್ತು ನೀಡುವ ವಿಪತ್ತು ನಿರೋಧಕ ಮೂಲಸೌಕರ್ಯ ಒಕ್ಕೂಟದಂತಹ ಉಪಕ್ರಮಗಳ ಮೂಲಕ ಭಾರತ ಜಾಗತಿಕ ಮಟ್ಟದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ತಿಳಿಸಿದ್ದಾರೆ.

ಹಸಿರು, ಸ್ವಚ್ಛ ಮತ್ತು ಹೆಚ್ಚು ಸುಸ್ಥಿರ ಭವಿಷ್ಯ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಕೈಜೋಡಿಸಬೇಕು. ಪರಿಸರ ಸಂರಕ್ಷಣೆ ಮತ್ತು ನೈಸರ್ಗಿಕ ಸಂಪನ್ಮೂಲಗಳ ಉಳಿವು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಜೈಶಂಕರ್ ಕರೆ ನೀಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande