
ಸಂಡೂರು, 05 ಜೂನ್ (ಹಿ.ಸ.) :
ಆ್ಯಂಕರ್ : ಚೋರನೂರು ಗ್ರಾಮದಲ್ಲಿ ಸಿಎಫ್2-ಸೋವೆನಹಳ್ಳಿ ಮತ್ತು ಸಿಎಫ್4-ಚೋರನೂರು ಫೀಡರ್ಗಳ 11ಕೆವಿ ವಿದ್ಯುತ್ ಮಾರ್ಗಗಳ ತುರ್ತು ನಿರ್ವಾಹಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಸೋವೆನಹಳ್ಳಿ, ಅಗ್ರಹಾರ, ಚೋರನೂರ ಮತ್ತು ಬೊಮ್ಮಗಟ್ಟ ಗ್ರಾಮ ಪಂಚಾಯತಿಯ ವ್ಯಾಪ್ತಿಗೆ ಒಳಪಡುವ ಗ್ರಾಮಗಳಲ್ಲಿ ಎನ್ಜೆವೈ ಗ್ರಾಹಕರಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸಂಡೂರು, ಕಾರ್ಯ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಉಮೇಶ ಕುಮಾರ್ ಅವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್