ರಾಜ್ಯದ ಹಲವೆಡೆ ಗುಡುಗು, ಸಿಡಿಲು ಸಹಿತ ಮಳೆ ಮುನ್ಸೂಚನೆ
ಬೆಂಗಳೂರು, 05 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯದಾದ್ಯಂತ ಇಂದು ಹಲವೆಡೆ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳು, ಕರಾವಳಿ ಭಾಗಕ್
Forecast


ಬೆಂಗಳೂರು, 05 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯದಾದ್ಯಂತ ಇಂದು ಹಲವೆಡೆ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ವಿಶೇಷವಾಗಿ ಕರಾವಳಿ ಜಿಲ್ಲೆಗಳು, ಕರಾವಳಿ ಭಾಗಕ್ಕೆ ಹೊಂದಿಕೊಂಡಿರುವ ಮಲೆನಾಡು ಪ್ರದೇಶಗಳು ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಗುಡುಗು-ಸಿಡಿಲಿನ ಸಂದರ್ಭಗಳಲ್ಲಿ ತೆರೆದ ಪ್ರದೇಶಗಳಲ್ಲಿ ನಿಲ್ಲುವುದು, ಮರಗಳ ಕೆಳಗೆ ಆಶ್ರಯ ಪಡೆಯುವುದು ಹಾಗೂ ಅನಗತ್ಯ ಸಂಚಾರವನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ. ಮೀನುಗಾರರು ಮತ್ತು ನದಿ-ಕೆರೆಯ ತೀರ ಪ್ರದೇಶದ ನಿವಾಸಿಗಳು ಹವಾಮಾನ ಇಲಾಖೆಯ ಸೂಚನೆಗಳನ್ನು ಗಮನದಲ್ಲಿಟ್ಟುಕೊಳ್ಳುವಂತೆ ಮನವಿ ಮಾಡಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande