ರಾಮಲಿಂಗಾರೆಡ್ಡಿ : ಮಾತುಕತೆಯ ಮೂಲಕ ಬಗೆಹರಿಸುತ್ತೇವೆ- ಡಿ.ಕೆ. ಶಿವಕುಮಾರ್
ಬೆಂಗಳೂರು, 05 ಜೂನ್ (ಹಿ.ಸ.) : ಆ್ಯಂಕರ್ : ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗ
Cm


ಬೆಂಗಳೂರು, 05 ಜೂನ್ (ಹಿ.ಸ.) :

ಆ್ಯಂಕರ್ : ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ಕಾಂಗ್ರೆಸ್ ನಾಯಕ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮಲಿಂಗಾರೆಡ್ಡಿಯವರು ನಮ್ಮ ಪಕ್ಷದ ಹಿರಿಯ ನಾಯಕರು ಹಾಗೂ ನನ್ನ ಆಪ್ತ ಸ್ನೇಹಿತರು. ಅವರ ಅಸಮಾಧಾನವನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುತ್ತೇವೆ. ಅವರಿಗೆ ಕೆಲವು ಖಾತೆಗಳ ಬಗ್ಗೆ ಆಕ್ಷೇಪವಿದ್ದು, ಈ ಕುರಿತು ಅವರೊಂದಿಗೆ ಚರ್ಚೆ ನಡೆಸಲಾಗುವುದು. ಸಚಿವ ಸಂಪುಟದಲ್ಲಿಯೂ ಈ ವಿಷಯವನ್ನು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದರು.

ರಾಮಲಿಂಗಾರೆಡ್ಡಿಯವರಿಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಲಾಗಿತ್ತು. ಆದರೆ ಈ ಖಾತೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಅವರು, ನಗರಾಭಿವೃದ್ಧಿ ಅಥವಾ ಬೆಂಗಳೂರು ಸಂಬಂಧಿತ ಖಾತೆ ನೀಡಬೇಕೆಂಬ ನಿರೀಕ್ಷೆಯಲ್ಲಿದ್ದರು.

ಈ ಹಿನ್ನೆಲೆಯಲ್ಲಿ ಕೋರಮಂಗಲದಲ್ಲಿರುವ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ನಡೆಸಿದ ರಾಮಲಿಂಗಾರೆಡ್ಡಿ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅಧಿಕೃತವಾಗಿ ಘೋಷಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande