ಇಂದು ಮಾ. ಕೃ. ರುಕ್ಮಿಣಿರವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ
ಬೆಂಗಳೂರು, 05 ಜೂನ್ (ಹಿ.ಸ.) : ಆ್ಯಂಕರ್ : ಇತ್ತೀಚೆಗೆ ನಿಧನರಾದ ರಾಷ್ಟ್ರ ಸೇವಿಕಾ ಸಮಿತಿಯ ಪೂರ್ವ ಅಖಿಲ ಭಾರತೀಯ ಸಹಕಾರ್ಯವಾಹಿಕಾ ಮಾ. ಕೃ. ರುಕ್ಮಿಣಿ ಅವರ ಸ್ಮರಣಾರ್ಥ ಶ್ರದ್ಧಾಂಜಲಿ ಕಾರ್ಯಕ್ರಮವು ಇಂದು ಬೆಂಗಳೂರಿನಲ್ಲಿ ನಡೆಯಲಿದೆ. ನಗರದ ಕೆಂಪೇಗೌಡ ನಗರದ ರಾಷ್ಟ್ರೋತ್ಥಾನ ಪರಿಷತ್ ಆವರಣದಲ್ಲಿರು
Tribute


ಬೆಂಗಳೂರು, 05 ಜೂನ್ (ಹಿ.ಸ.) :

ಆ್ಯಂಕರ್ : ಇತ್ತೀಚೆಗೆ ನಿಧನರಾದ ರಾಷ್ಟ್ರ ಸೇವಿಕಾ ಸಮಿತಿಯ ಪೂರ್ವ ಅಖಿಲ ಭಾರತೀಯ ಸಹಕಾರ್ಯವಾಹಿಕಾ ಮಾ. ಕೃ. ರುಕ್ಮಿಣಿ ಅವರ ಸ್ಮರಣಾರ್ಥ ಶ್ರದ್ಧಾಂಜಲಿ ಕಾರ್ಯಕ್ರಮವು ಇಂದು ಬೆಂಗಳೂರಿನಲ್ಲಿ ನಡೆಯಲಿದೆ.

ನಗರದ ಕೆಂಪೇಗೌಡ ನಗರದ ರಾಷ್ಟ್ರೋತ್ಥಾನ ಪರಿಷತ್ ಆವರಣದಲ್ಲಿರುವ ಕೇಶವಶಿಲ್ಪಾ ಸಭಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದೆ.

ಉಮಾ ಥಿಯೇಟರ್ ಸಮೀಪದಲ್ಲಿರುವ ಈ ಸಭಾಂಗಣದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ರಾಷ್ಟ್ರ ಸೇವಿಕಾ ಸಮಿತಿಯ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಭಾಗವಹಿಸಿ ದಿವಂಗತ ರುಕ್ಮಿಣಿ ಅವರಿಗೆ ಗೌರವ ನಮನ ಸಲ್ಲಿಸಲಿದ್ದಾರೆ ಎಂದು ಪ್ರಾಂತ ಕಾರ್ಯವಾಹಿಕಾ ಶ್ರೀಮತಿ ವಸಂತಾ ಸ್ವಾಮಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande