ಬುದ್ಧವಿಹಾರಕ್ಕೆ ಎಂ ಬಿ ಪಾಟೀಲ್ ಭೇಟಿ ; ಭಗವಾನ್ ಬುದ್ಧರಿಗೆ ನಮನ
ವಿಜಯಪುರ, 07 ಜೂನ್ (ಹಿ.ಸ.) : ಆಂಕರ್ : ವಿಜಯಪುರ ನಗರದ ಬುದ್ಧವಿಹಾರಕ್ಕೆ ಭೇಟಿ ನೀಡಿದ ಸಚಿವ ಎಂ ಬಿ ಪಾಟೀಲ್, ಭಗವಾನ್ ಬುದ್ಧರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿ, ಶಾಂತಿ, ಸೌಹಾರ್ದತೆ, ಧ್ಯಾನ ಮತ್ತು ಜ್ಞಾನದ ಪ್ರತೀಕವಾಗಿರುವ ಅವರ ಆದರ್ಶಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಬುದ್ಧರು ಮಾನವಕುಲಕ್ಕೆ
ಪೂಜೆ


ವಿಜಯಪುರ, 07 ಜೂನ್ (ಹಿ.ಸ.) :

ಆಂಕರ್ : ವಿಜಯಪುರ ನಗರದ ಬುದ್ಧವಿಹಾರಕ್ಕೆ ಭೇಟಿ ನೀಡಿದ ಸಚಿವ ಎಂ ಬಿ ಪಾಟೀಲ್, ಭಗವಾನ್ ಬುದ್ಧರಿಗೆ ಭಕ್ತಿಪೂರ್ವಕ ನಮನ ಸಲ್ಲಿಸಿ, ಶಾಂತಿ, ಸೌಹಾರ್ದತೆ, ಧ್ಯಾನ ಮತ್ತು ಜ್ಞಾನದ ಪ್ರತೀಕವಾಗಿರುವ ಅವರ ಆದರ್ಶಗಳನ್ನು ಸ್ಮರಿಸಿದರು. ಈ ಸಂದರ್ಭದಲ್ಲಿ ಬುದ್ಧರು ಮಾನವಕುಲಕ್ಕೆ ನೀಡಿದ ಅಮೂಲ್ಯ ಸಂದೇಶಗಳು ಹಾಗೂ ಸಮಾಜದ ಒಳಿತಿಗಾಗಿ ಮಾಡಿದ ಅಪೂರ್ವ ಕೊಡುಗೆಗಳನ್ನು ನೆನಪಿಸಿಕೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಗತ್ತಿಗೆ ಶಾಂತಿ, ಅಹಿಂಸೆ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ದಾರಿಯನ್ನು ತೋರಿದ ಮಹಾನ್ ಚಿಂತಕರಲ್ಲಿ ಭಗವಾನ್ ಬುದ್ಧರು ಪ್ರಮುಖರು ಎಂದು ಹೇಳಿದರು. ಸಮಾಜದಲ್ಲಿನ ಅಸಮಾನತೆ, ಶೋಷಣೆ ಮತ್ತು ಅನ್ಯಾಯದ ವಿರುದ್ಧ ಹೋರಾಡಿ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಮಹನೀಯರಾಗಿ ಬುದ್ಧರು ಇಂದಿಗೂ ಕೋಟ್ಯಂತರ ಜನರಿಗೆ ಪ್ರೇರಣೆಯಾಗಿದ್ದಾರೆ ಎಂದು ಅಭಿಪ್ರಾಯಪಟ್ಟರು.

ಸಾಮಾಜಿಕ ಪರಿವರ್ತನೆ ಮತ್ತು ಸಮಾಜೋದ್ಧಾರದ ವಿಚಾರದಲ್ಲಿ ಭಗವಾನ್ ಬುದ್ಧ, ಜಗಜ್ಯೋತಿ ಬಸವಣ್ಣ ಹಾಗೂ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆಗಳು ಅಪಾರವಾಗಿವೆ. ಈ ಮಹನೀಯರ ಚಿಂತನೆಗಳು ಇಂದಿನ ಸಮಾಜಕ್ಕೂ ಮಾರ್ಗದರ್ಶಕವಾಗಿದ್ದು, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಸ್ಥಾಪನೆಗೆ ಅವರ ಸಂದೇಶಗಳು ಅತ್ಯಂತ ಪ್ರಸ್ತುತವಾಗಿವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬುದ್ಧ ವಿಹಾರ ನಿರ್ಮಾಣ ಸಮಿತಿಯ ಅಧ್ಯಕ್ಷರಾದ ರಾಜಶೇಖರ ಯಡಹಳ್ಳಿ, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಚಂದ್ರಶೇಖರ ಕೊಡಬಾಗಿ, ಮಾಜಿ ಶಾಸಕರಾದ ರಾಜು ಆಲಗೂರ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಬುದ್ಧವಿಹಾರದ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿ ಗೌರವ ಸಲ್ಲಿಸಿದರು.

ಕಾರ್ಯಕ್ರಮದ ವೇಳೆ ಸದಸ್ಯರು ಹಾಗೂ ಹಿರಿಯರು ನೀಡಿದ ನೋಟ್ಬುಕ್ಗಳನ್ನು ಸ್ವೀಕರಿಸಿ ಮಾತನಾಡಿದ ಅವರು, “ಜ್ಞಾನ ದಾನವೇ ಶ್ರೇಷ್ಠ ದಾನ” ಎಂಬ ತತ್ವದಂತೆ ಈ ಪುಸ್ತಕಗಳನ್ನು ಅಗತ್ಯವಿರುವ ವಿದ್ಯಾರ್ಥಿಗಳಿಗೆ ತಲುಪಿಸಿ ಅವರ ಶಿಕ್ಷಣಕ್ಕೆ ನೆರವಾಗುವ ಸಂಕಲ್ಪ ಹೊಂದಿದ್ದೇವೆ ಎಂದು ಹೇಳಿದರು. ಶಿಕ್ಷಣದ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಾಗಿದ್ದು, ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಬುದ್ಧವಿಹಾರದ ಪ್ರಶಾಂತ ವಾತಾವರಣದಲ್ಲಿ ಕೆಲ ಕಾಲ ಕಳೆದ ಅನುಭವ ಮನಸ್ಸಿಗೆ ಅಪಾರ ನೆಮ್ಮದಿ, ಶಾಂತಿ ಹಾಗೂ ಹೊಸ ಚೈತನ್ಯವನ್ನು ನೀಡಿದೆ ಎಂದು ಅವರು ತಿಳಿಸಿದರು. ಸಮಾಜದ ಸರ್ವಜನರ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಪ್ರೀತಿ, ಸಹೋದರತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಅಗತ್ಯವನ್ನು ಒತ್ತಿ ಹೇಳಿದರು.

ಕಾರ್ಯಕ್ರಮವು ಶಾಂತಿ, ಸಮಾನತೆ ಮತ್ತು ಜ್ಞಾನಕ್ಕೆ ಬದ್ಧತೆಯನ್ನು ಪುನರುಚ್ಚರಿಸುವ ಮೂಲಕ ಅರ್ಥಪೂರ್ಣವಾಗಿ ನೆರವೇರಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande