ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ₹30 ಲಕ್ಷ ರಸ್ತೆ ಕಾಮಗಾರಿಗೆ ಭೂಮಿ ಪೂಜೆ
ವಿಜಯಪುರ, 08 ಜೂನ್ (ಹಿ.ಸ.) : ಆಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ 2025-26ನೇ ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾಗಿರುವ ₹30 ಲಕ್ಷ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಸಿಂದಗಿ ನಗರದಲ್ಲಿ ಭ
ಪೂಜೆ


ವಿಜಯಪುರ, 08 ಜೂನ್ (ಹಿ.ಸ.) :

ಆಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ

ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ವೇಗ ನೀಡುವ ನಿಟ್ಟಿನಲ್ಲಿ 2025-26ನೇ ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಮಂಜೂರಾಗಿರುವ ₹30 ಲಕ್ಷ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಸಿಂದಗಿ ನಗರದಲ್ಲಿ ಭೂಮಿ ಪೂಜೆ ನೆರವೇರಿಸುವ ಮೂಲಕ ಶಾಸಕ ಅಶೋಕ್ ಮನಗೂಳಿ ಅಧಿಕೃತ ಚಾಲನೆ ನೀಡಿದರು.

ಸಿಂದಗಿ ನಗರದ ಸೋಂಪುರ ರಸ್ತೆಯ ಬಸವ ಮಂಟಪದಿಂದ ಕುಮಸಗಿ ಸರ್ ಅವರ ಮನೆಯವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಈ ರಸ್ತೆ ನಿರ್ಮಾಣದಿಂದ ಸ್ಥಳೀಯ ನಿವಾಸಿಗಳ ಬಹುಕಾಲದ ಬೇಡಿಕೆ ಈಡೇರಿದಂತಾಗಿದೆ. ಕಾಮಗಾರಿಯ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿ ಅಭಿವೃದ್ಧಿ ಕಾರ್ಯಕ್ಕೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ರಸ್ತೆ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳು ನಗರದ ಸಮಗ್ರ ಬೆಳವಣಿಗೆಗೆ ಪೂರಕವಾಗಿವೆ ಎಂದು ಹೇಳಿದರು. ಉತ್ತಮ ರಸ್ತೆ ಸಂಪರ್ಕವು ಸಾರ್ವಜನಿಕರ ಸಂಚಾರ ಸುಗಮಗೊಳಿಸುವುದರ ಜೊತೆಗೆ ವ್ಯಾಪಾರ, ಶಿಕ್ಷಣ ಹಾಗೂ ಸಾಮಾಜಿಕ ಚಟುವಟಿಕೆಗಳಿಗೂ ಅನುಕೂಲ ಕಲ್ಪಿಸುತ್ತದೆ ಎಂದು ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ವಿವಿಧ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಅಗತ್ಯವಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, ಸಿಂದಗಿ ಕ್ಷೇತ್ರದಲ್ಲಿಯೂ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಲಾಯಿತು.

ಸೋಂಪುರ ರಸ್ತೆಯ ಈ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಸ್ಥಳೀಯ ನಿವಾಸಿಗಳಿಗೆ ಮಳೆಗಾಲದಲ್ಲಿ ಎದುರಾಗುವ ತೊಂದರೆಗಳು ಕಡಿಮೆಯಾಗಲಿದ್ದು, ವಾಹನ ಸಂಚಾರ ಮತ್ತಷ್ಟು ಸುಗಮವಾಗಲಿದೆ. ಅಲ್ಲದೆ, ಪ್ರದೇಶದ ಅಭಿವೃದ್ಧಿಗೆ ಹೊಸ ಉತ್ತೇಜನ ದೊರೆಯುವ ನಿರೀಕ್ಷೆಯಿದೆ.

ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ನಾಮ ನಿರ್ದೇಶನ ಸದಸ್ಯರು, ಕಾರ್ಯಕರ್ತರು, ವಾರ್ಡಿನ ನಾಗರಿಕರು, ಮಹಿಳಾ ಮುಖಂಡರು, ಯುವಕ ಮಿತ್ರರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದು, ಅಭಿವೃದ್ಧಿ ಕಾಮಗಾರಿಯ ಆರಂಭವನ್ನು ಸ್ವಾಗತಿಸಿದರು.

ಸಾರ್ವಜನಿಕರು ಕೂಡ ರಸ್ತೆ ನಿರ್ಮಾಣ ಕಾಮಗಾರಿ ಶೀಘ್ರ ಪೂರ್ಣಗೊಂಡು ಜನರ ಬಳಕೆಗೆ ಲಭ್ಯವಾಗಲಿ ಎಂಬ ಆಶಯ ವ್ಯಕ್ತಪಡಿಸಿದರು. ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರದ ಬದ್ಧತೆಯ ಪ್ರತೀಕವಾಗಿರುವ ಈ ಯೋಜನೆ, ಸಿಂದಗಿಯ ಸಮಗ್ರ ಅಭಿವೃದ್ಧಿಗೆ ಮತ್ತೊಂದು ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande