
ನವದೆಹಲಿ, 08 ಜೂನ್ (ಹಿ.ಸ.) :
ಆ್ಯಂಕರ್ : ಆಮ್ ಆದ್ಮಿ ಪಕ್ಷ (ಎಎಪಿ) ಇನ್ನು ಮುಂದೆ ಇಂಡಿಯಾ ಮೈತ್ರಿಕೂಟದ ಭಾಗವಾಗಿಲ್ಲ ಎಂದು ಎಎಪಿ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಸಂಜಯ್ ಸಿಂಗ್, ಎಎಪಿ ಈಗಾಗಲೇ ತಾನು ಇಂಡಿಯಾ ಮೈತ್ರಿಕೂಟದ ಭಾಗವಲ್ಲ ಎಂಬುದನ್ನು ಸ್ಪಷ್ಟವಾಗಿ ಘೋಷಿಸಿದೆ. ಹೀಗಾಗಿ ಮೈತ್ರಿಕೂಟದ ಸಭೆಯಲ್ಲಿ ಭಾಗವಹಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಹೇಳಿದರು.
ಈ ವೇಳೆ ಅವರು ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದರು. ತಮಿಳುನಾಡಿನಲ್ಲಿ ಬದಲಾಗುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆ, ಆಡಳಿತಾರೂಢ ಡಿಎಂಕೆ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ನಟ ವಿಜಯ ಅವರ ಟಿವಿಕೆ ಪಕ್ಷಕ್ಕೆ ಕಾಂಗ್ರೆಸ್ ಬೆಂಬಲ ನೀಡುತ್ತಿರುವುದು ಉಭಯ ಪಕ್ಷಗಳ ನಡುವಿನ ಸಂಬಂಧ ಹದಗೆಡಲು ಕಾರಣವಾಗಿದೆ ಎಂದು ಆರೋಪಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh.M.B.