ಚುನಾವಣೆ ಚದುರಂಗದ ಆಟ : ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ವಿದ್ಯಮಾನಗಳು
Cm


ಬೆಂಗಳೂರು, 08 ಜೂನ್ (ಹಿ.ಸ.) :

ಆ್ಯಂಕರ್ : ವಿಧಾನ ಪರಿಷತ್ ಚುನಾವಣೆಯ ರಾಜಕೀಯ ವಿದ್ಯಮಾನಗಳ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ರಾಜಕಾರಣದಲ್ಲಿ ತಂತ್ರಗಳನ್ನು ಮುಂಚಿತವಾಗಿ ಬಹಿರಂಗಪಡಿಸುವುದಿಲ್ಲ ಎಂದು ಹೇಳಿದ್ದಾರೆ.

ಸೋಮವಾರ ವಿಧಾನ ಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ವಿನಯ್ ಕಾರ್ತಿಕ್ ಸ್ಪರ್ಧೆ ಹಾಗೂ ಜೆಡಿಎಸ್ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ, “ರಾಜಕಾರಣದಲ್ಲಿ ಚದುರಂಗದ ಆಟ ಆಡುವಾಗ ಯಾವ ಕಾಯಿ ನಡೆಸುತ್ತೇವೆ ಎಂದು ಯಾರಾದರೂ ಹೇಳುತ್ತಾರೆಯೇ? ಯಾರೂ ಹೇಳುವುದಿಲ್ಲ” ಎಂದು ಹೇಳಿದರು.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ರಾಜ್ಯ ಸಭೆ ಟಿಕೆಟ್ ನಿರಾಕರಿಸಿರುವ ಕುರಿತು ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಟೀಕಿಸಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ನಾನು ಸದ್ಯಕ್ಕೆ ಈ ವಿಷಯದ ಬಗ್ಗೆ ಏನೂ ಮಾತನಾಡುವುದಿಲ್ಲ. ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ನಾನು ಈ ಬಗ್ಗೆ ಮಾತನಾಡಲು ಹೋಗುವುದಿಲ್ಲ. ನಮ್ಮ ಪಕ್ಷದ ಚಿಂತನೆ ಹಾಗೂ ನಿಲುವನ್ನು ನಾನು ಪಾಲನೆ ಮಾಡುತ್ತೇನೆ” ಎಂದು ತಿಳಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande